ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ತಜ್ಞವೈದ್ಯರ ಹುದ್ದೆಗಳಿಗೆ ಹಾಗೂ ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗೆ ಎಂ.ಬಿ.ಬಿ.ಎಸ್ ವೈದ್ಯರನ್ನು ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲು ಏ. 24 ರಂದು ನೇರ ಸಂದರ್ಶನ ಕರೆಯಲಾಗಿದೆ.\
ಜಿಲ್ಲೆಯ ವಿವಿಧ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 09 ತಜ್ಞವೈದ್ಯರನ್ನು ಸಂದರ್ಶನದ ಮೂಲಕ ನೇಮಕ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಏ.24 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಏ.23 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ದಾವಣಗೆರೆ ಇಲ್ಲಿಗೆ ಹಾಜರಾಗಿ ಸಂಬಂಧಪಟ್ಟ ವಿಭಾಗದಲ್ಲಿ ವಿದ್ಯಾರ್ಹತೆಯ ಅರ್ಹತಾ ಮೂಲ ದಾಖಲೆಗಳ ಪರಿಶೀಲನೆ ಮಾಡಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ
ಡಾ. ರಾಘವೇಂದ್ರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.