ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಹೋ.ಚಿ. ಬೋರಯ್ಯ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಜ.22 ರಂದು ಬೆಳಿಗ್ಗೆ 10 ಗಂಟೆಗೆ ಜಗಳೂರಿನ ಹೋ.ಚಿ. ಬೋರಯ್ಯ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಉದ್ಯೋಗ ಮೇಳ ಆಯೋಜಿಸಿದೆ.
ಉದ್ಯೋಗ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸುತ್ತಿದ್ದು, ಪಿಯುಸಿ, ಐ.ಟಿ.ಐ. ಡಿಪ್ಲೊಮ, ಬಿ.ಎ, ಬಿ.ಎಸ್‍ಸಿ, ಬಿ.ಸಿ.ಎ, ಬಿ.ಬಿ.ಎಂ, ಬಿ.ಬಿ.ಎ, ಬಿ.ಕಾಂ, ಬಿ.ಎಸ್‍ಸಿ (ನರ್ಸಿಂಗ್), ಎಂ.ಬಿ.ಎ, ಹಾಗೂ ಎಂ.ಕಾಂ ಪದವಿ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಕನಿಷ್ಠ ಬಯೋಡಾಟಾ, ಆಧಾರ್ ಕಾರ್ಡ್‍ನೊಂದಿಗೆ ಆಗಮಿಸಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ: 08192-259446, ಹಾಗೂ ಮೊ-6361550016, 7406323294 ಗೆ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ರವೀಂದ್ರ.ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.