ಡಿವಿಜಿ ಸುದ್ದಿ,ದಾವಣಗೆರೆ: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರೆ ನೀಡಲಾಗಿದ್ದ ಬಂದ್ ಬದಲು ಪ್ರತಿಭಟನೆ ನಡೆಸಲು ಕನ್ನಡ ಪರ ಸಂಘಟನೆಗಳ ಒಕ್ಕೂಟ ನಿರ್ಧರಿಸಿವೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಕರ್ನಾಟಕ ರಕ್ಷಣ ವೇದಿಕೆ ಅಧ್ಯಕ್ಷ ಕೆ.ಜಿ. ಯಲ್ಲಪ್ಪ ಮಾತನಾಡಿ, ಕನ್ನಡಿಗರಿಗೆ ಉದ್ಯೋದಲ್ಲಿ ಮೀಸಲಾತಿ ನೀಡೇಕು ಎಂದು ಆಗ್ರಹಿಸಿ 3 ದಶಕದಿಂದ ಹೋರಾಟ ನಡೆಸಿಕೊಂಡು ಬಂದಿದ್ದೇವೆ. ಸರೋಜಿನಿ ಮಹಿಷಿ ವರದಿ ಜಾರಿಯಿಂದ ಕನ್ನಡಿಗರಿಗೆ ಉದ್ಯೋಗಲ್ಲಿ ಮೀಸಲಾತಿ ಸಿಗಲಿದೆ. ಆದರೆ, ಆಡಳಿತ ನಡೆಸುವ ಯಾವ ಸರ್ಕಾರವೂ ವರದಿ ಜಾರಿಯ ಇಚ್ಛಾಶಕ್ತಿ ಪ್ರದರ್ಶನ ಮಾಡಿಲ್ಲ.
ಈ ಬಗ್ಗೆ ರಾಜ್ಯ ಸರ್ಕಾರವನ್ನು ಗಮನ ಸೆಳೆಯುವ ಉದ್ದೇಶದಿಂದ ಬಂದ್ ಗೆ ಕರೆ ನೀಡಲಾಗಿತ್ತು. ಆದರೆ, ಬಂದ್ ಬದಲು ಕೇವಲ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದಿದರು.
ರೈತ ಮುಖಂಡ ಬಲ್ಲೂರು ರವಿಕುಮಾರ ಮಾತನಾಡಿ,ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವಂತೆ ಸಂಸದರು, ಶಾಸಕರು ಅಧಿವೇಶನದಲ್ಲಿ ಧ್ವನಿ ಎತ್ತುವ ಕೆಲಸ ವಾಗಬೇಕೆಂದು ಆಗ್ರಹಿಸಿದರು.
ಕನ್ನಡ ಪರ ಹೋರಾಟಗಾರ ಕೆ.ಜಿ. ಶಿವಕುಮಾರ ಮಾತನಾಡಿ, ಸರೋಜನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಫೆ. 13 ರಂದು ನಗರದ ಜಯದೇವ ವೃತ್ತದ ಬಳಿ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ . ಸಾರ್ವಜನಿಕರು ಸಹಕರಿಸಿ ಈ ಪ್ರತಿಭಟನೆಯಲ್ಲಿ ಭಾಗಿಯಾಗಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಟಿ.ಶಿವಕುಮಾರ, ಅವಿನಾಶ್, ಹಾಲೇಶ್, ಸುವರ್ಣಮ್ಮ, ಶಾಂತಮ್ಮ , ಸೌಮ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



