ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪಟ್ಟಣದಲ್ಲಿ ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಬಸವರಾಜ್ ಶಿವಗಂಗಾ ಅವರು ಎರಡನೇ ಸಲ ಪಟ್ಟಣದ ಟ್ಯಾಕ್ಸಿ ಚಾಲಕರಿಗೆ ಹಾಗೂ ಬಡ ಕುಟುಂಬಗಳಿಗೆ ಒಂದು ಸಾವಿರ ಆಹಾರ ಕಿಟ್ ವಿತರಿಸಿದರು.
ಕೊರೊನಾ ವೈರಸ್ ನಿಂದ ಬಡವರು ಮತ್ತು ಮಧ್ಯಮ ವರ್ಗದವರು ಜೀವನ ನಡೆಸುವುದು ಕಷ್ಟಕರವಾಗಿದೆ. ಇಂತಹ ಸಂದರ್ಭದಲ್ಲಿ ಎಲ್ಲರೂ ಮಾನವೀಯತೆಯಿಂದ ಉಳ್ಳವರು ಕೈಲಾದಷ್ಟು ಸಹಾಯ ನೀಡಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ನಿಂಗಪ್ಪ, ತನ್ವೀರ್, ಅಸ್ಲಾಂ, ಮಂಜುನಾಥ್, ಬ್ಲಾಕ್ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್, ವಡ್ನಾಳ್ ಜಗದೀಶ್. ಅಮಾನುಲ್ಲಾ ಮುಂತಾದವರು ಉಪಸ್ಥಿತರೆಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ.ಎಲ್. ಹರೀಶ್ ತಿಳಿಸಿದರು.



