ಡಿವಿಜಿ ಸುದ್ದಿ, ದಾವಣಗೆರೆ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧದ ಜರ್ನಲಿಸ್ಟ್ ಅರ್ನಬ್ ಗೋಸ್ವಾಮಿ ಹೀನಾಯವಾಗಿ ನಿಂಧಿಸಿರುವುದನ್ನು ಖಂಡಿಸಿ ಹಾಗೂ ಸಂಪಾದಕರ ವಿರುದ್ದ ದಾವಣಗೆರೆ ಬಡಾವಣೆ ಠಾಣೆಯಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್ ಅವರು ಬಡಾವಣಾ ಠಾಣೆಯಲ್ಲಿ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಎಂ ರಾಜೀವ್ ಅವರಲ್ಲಿ ದೂರು ದಾಖಲಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಸೆಕ್ಷನ್ 153 (ಎ), 295 (ಎ) ಮತ್ತು 505 ಸೆಕ್ಷನ್ ಪ್ರಕಾರ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ವೇಳೆ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಎಂ. ಜಯಪ್ರಕಾಶ್, ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷ ಟಿ.ವಿ ಗಿರಿಧರ್, ಜಿಲ್ಲಾಇಂಟೆಕ್ ಕಾಂಗ್ರೆಸ್ ಅದ್ಯಕ್ಷ ಕೆ.ಎಂ ಮಂಜುನಾಥ್, ಡಿ ಶಿವಕುಮಾರ್ ಇದ್ದರು.



