ಡಿವಿಜಿ ಸುದ್ದಿ, ದಾವಣಗೆರೆ: ಸೋನಿಯಾ ಗಾಂಧಿ ಬ್ರಿಗೇಡ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ತಾಲೂಕು ಪಂಚಾಯತ್ ಸದಸ್ಯೆ ಆಶಾರಾಣಿ ಮುರುಳಿ ಸ್ವಯಂ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಬ್ರಿಗೇಡ್ ಜಿಲ್ಲಾ ಘಟಕ ಅಧ್ಯಕ್ಷ ಮೊಹಮದ್ ಜಿಕ್ರಿಯ ಮುಂತಾದವರು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್, ಬ್ರಿಗೇಡ್ ಜಿಲ್ಲಾ ಸಂಚಾಲಕ ಬಾತಿ ಶಿವಕುಮಾರ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ ಎಲ್ ಹರೀಶ್ ಬಸಾಪುರ , ಎನ್ ಎಸ್ ಯು ಐ ಪ್ರಧಾನ ಕಾರ್ಯದರ್ಶಿ ಶಶಿಧರ್ ಪಾಟೀಲ್, ಉತ್ತರ ವಿಭಾಗದ ಅಧ್ಯಕ್ಷ ಗಿರಿಧರ ಟಿ.ವಿ, ದಾವಣಗೆರೆ ದಕ್ಷಿಣ ಸಾಮಾಜಿಕ ಜಾಲತಾಣದ ಮಾಲತೇಶ್, ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ಪ್ರವೀಣ್, ಮುಖಂಡರ ಮುರಳಿ, ಸತೀಶ್ ಆರ್, ಮಹಾರುದ್ರಚಾರ್ ಮುಂತಾದವರು ಉಪಸ್ಥಿತರಿದ್ದರು.



