ಡಿವಿಜಿ ಸುದ್ದಿ, ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಕೆಪಿಸಿಸಿ ವಕ್ತಾರರು, ಮಾಧ್ಯಮ ವಿಶ್ಲೇಷಕರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಕೆಪಿಸಿಸಿ ಕಚೇರಿಯಲ್ಲಿ ಇಂದ ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ದಾವಣಗೆರೆಯಿಂದ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಭಾಗವಹಿಸಿ ಡಿ.ಕೆ. ಶಿವಕುಮಾರ್ ಜೊತೆಗೆ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಮಾಡಿದ ಸಾಧನೆಗಳನ್ನು ರಾಜ್ಯ ಮತ್ತು ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯಗಳ ಬಗ್ಗೆ ತಾವು ವಾರಕ್ಕೊಮ್ಮೆ ಮಾಧ್ಯಮಗೋಷ್ಠಿ ನಡೆಸುತ್ತಿರುವುದು. ಹೋರಾಟದ ಮುಖಾಂತರ ಕಾಂಗ್ರೆಸ್ ಪಕ್ಷದ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಡಿ. ಬಸವರಾಜ್ ತಿಳಿಸಿದರು.
ವಿಡಿಯೋ ಕಾನ್ಫರೆನ್ಸ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ವಿ.ಎಸ್. ಉಗ್ರಪ್ಪ ನವರು ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥರಾದ ಎ.ಎನ್. ನಟರಾಜ ಗೌಡರು ಭಾಗವಹಿಸಿದ್ದರು.