ಡಿವಿಜಿ ಸುದ್ದಿ, ದಾವಣಗೆರೆ: ಹಾಲಮತ ಸಮಾಜದ ಶ್ರೀಗಳಿಗೆ ಏಕವಚನದಲ್ಲಿ ಸಂಭೋಧಿಸಿದ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ ರಾಜೀನಾಮೆ ನೀಡಬೇಕೆಂದು ಜಿಲ್ಲಾ ಕುರುಬ ಸಂಘದ ಸಂಘಟನಾ ಕಾರ್ಯದರ್ಶಿ ರಾಜಕುಮಾರ್ ಆಗ್ರಹಿಸಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಳಿಯಾರ್ ಕನಕ ವೃತ್ತದ ನಾಮಫಲಕ ತೆರವುಗೊಳಿಸಿದ ಹಿನ್ನೆಲೆ ಹಾಲಮತ ಸಮಾಜದ ಈಶ್ವರಾನಂದ ಸ್ವಾಮೀಜಿ ನೇತೃತ್ವದಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಶ್ರೀಗಳನ್ನು ಏಕವಚನದಲ್ಲಿ ಸಂಬೋಧಿಸಿದ್ದಾರೆ. ಹೀಗಾಗಿ ಮಾಧುಸ್ವಾಮಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಸಿಎಂ ಯಡಿಯೂರಪ್ಪ, ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು. ಮಾಧುಸ್ವಾಮಿ ಕೂಡಲೇ ಕ್ಷಮೆ ಯಾಚಿಸಬೇಕು. ತಪ್ಪಿದಲ್ಲಿ ಅವರು ಭಾಗವಹಿಸುವ ಎಲ್ಲ ಸಭೆಗೂ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದರು.



