ಡಿವಿಜಿ ಸುದ್ದಿ, ದಾವಣಗೆರೆ: ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಿನ್ನೆಲೆ ಪೌರಕಾರ್ಮಿಕರ ಸಂಘದ ಉಪಾಧ್ಯಕ್ಷ ಸಾಗರ್ ಎಲ್.ಹೆಚ್, ಪಾಲಿಕೆಯ ಪೌರ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಕಾರ್ಮಿಕ ದಿನಾಚರಣೆಯ ಶುಭಾಶಯ ತಿಳಿಸಿದರು.
ಕೆಲಸದಲ್ಲಿ ಮೇಲು-ಕೀಳು ಎಂಬುದಿಲ್ಲ. ಮಾನವೀಯತೆಯನ್ನು ಎತ್ತಿ ಹಿಡಿಯುವ ಪ್ರತಿ ಕಾರ್ಯವೂ ಪ್ರಮುಖವಾದದ್ದು ಹಾಗೂ ಗೌರವಯುತವಾದದ್ದು. ಎಲ್ಲ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಸಮಾಜಕ್ಕೆ ಹಾಗೂ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಶ್ರಮಜೀವಿಗಳಿಗೆ ವಿಶ್ವ ಕಾರ್ಮಿಕರ ದಿನಾಚರಣೆಯ ಶುಭಾಶಯಗಳು ಎಂದರು.

ಪೌರ ಕಾರ್ಮಿಕರು ಕಾರ್ಯ ನಿರ್ವಹಿಸುವ ವೇಳೆಯಲ್ಲಿ ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ ಉಪಯೋಗಿಸಬೇಕು. ಸ್ವಚ್ಛತಾ ರೀತಿಯಲ್ಲಿ ಕೆಲಸವನ್ನು ಮಾಡಿ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಂಡು ಕಾರ್ಯನಿರ್ವಹಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಮಂಜುನಾಥ್ ಗಡಿಗುಡಾಳ್, ಬಿಜೆಪಿ ಯುವ ಮುಖಂಡ ಸುರೇಶ್ ಗಂಡಗಳ, ಮಹಾನಗರ ಪಾಲಿಕೆ ಕಿರಿಯ ಆರೋಗ್ಯ ನಿರೀಕ್ಷಕ ನೀಲಪ್ಪ, ಶಶಿಧರ್ ಎಸ್ ಬಳಿಗಾರ, ಮಹಾಂತೇಶ್, ರಾಜಪ್ಪ, ಪೇದೆಗಳಾದ ರವಿ ವರ್ಧನೆ, ಚಂದ್ರಶೇಖರ್, ಅರವಿಂದ್ ಕುಮಾರ್, ರಮೇಶ್ ಮಹಾಂತೇಶ್, ನಿಖಿಲ್ ಉಪಸ್ಥಿತರಿದ್ದರು.



