Connect with us

Dvgsuddi Kannada | online news portal | Kannada news online

ಪೌರ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಕಾರ್ಮಿಕ ದಿನದ ಶುಭಾಶಯ ಕೋರಿದ ಸಾಗರ್

ಪ್ರಮುಖ ಸುದ್ದಿ

ಪೌರ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಕಾರ್ಮಿಕ ದಿನದ ಶುಭಾಶಯ ಕೋರಿದ ಸಾಗರ್

ಡಿವಿಜಿ ಸುದ್ದಿ, ದಾವಣಗೆರೆ: ಅಂತರರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಹಿನ್ನೆಲೆ ಪೌರಕಾರ್ಮಿಕರ ಸಂಘದ ಉಪಾಧ್ಯಕ್ಷ ಸಾಗರ್ ಎಲ್.ಹೆಚ್,  ಪಾಲಿಕೆಯ ಪೌರ ಕಾರ್ಮಿಕರಿಗೆ ಮಾಸ್ಕ್ ವಿತರಿಸಿ ಕಾರ್ಮಿಕ ದಿನಾಚರಣೆಯ ಶುಭಾಶಯ ತಿಳಿಸಿದರು.

ಕೆಲಸದಲ್ಲಿ ಮೇಲು-ಕೀಳು ಎಂಬುದಿಲ್ಲ. ಮಾನವೀಯತೆಯನ್ನು ಎತ್ತಿ ಹಿಡಿಯುವ ಪ್ರತಿ ಕಾರ್ಯವೂ ಪ್ರಮುಖವಾದದ್ದು ಹಾಗೂ ಗೌರವಯುತವಾದದ್ದು. ಎಲ್ಲ ಕ್ಷೇತ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಮೂಲಕ ಸಮಾಜಕ್ಕೆ ಹಾಗೂ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ ಶ್ರಮಜೀವಿಗಳಿಗೆ ವಿಶ್ವ ಕಾರ್ಮಿಕರ ದಿನಾಚರಣೆಯ ಶುಭಾಶಯಗಳು ಎಂದರು.

sagar mask 2

ಪೌರ ಕಾರ್ಮಿಕರು  ಕಾರ್ಯ ನಿರ್ವಹಿಸುವ ವೇಳೆಯಲ್ಲಿ ಮಾಸ್ಕ್ ಮತ್ತು ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ ಉಪಯೋಗಿಸಬೇಕು.  ಸ್ವಚ್ಛತಾ ರೀತಿಯಲ್ಲಿ ಕೆಲಸವನ್ನು ಮಾಡಿ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಂಡು ಕಾರ್ಯನಿರ್ವಹಿಸಬೇಕೆಂದು  ಸಲಹೆ ನೀಡಿದರು.

ಈ  ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಮಂಜುನಾಥ್ ಗಡಿಗುಡಾಳ್, ಬಿಜೆಪಿ ಯುವ ಮುಖಂಡ ಸುರೇಶ್ ಗಂಡಗಳ, ಮಹಾನಗರ ಪಾಲಿಕೆ ಕಿರಿಯ ಆರೋಗ್ಯ ನಿರೀಕ್ಷಕ ನೀಲಪ್ಪ, ಶಶಿಧರ್ ಎಸ್ ಬಳಿಗಾರ, ಮಹಾಂತೇಶ್, ರಾಜಪ್ಪ,  ಪೇದೆಗಳಾದ ರವಿ ವರ್ಧನೆ, ಚಂದ್ರಶೇಖರ್,  ಅರವಿಂದ್ ಕುಮಾರ್, ರಮೇಶ್ ಮಹಾಂತೇಶ್, ನಿಖಿಲ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top