Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಲಾಕ್ ಡೌನ್ ಸಡಿಲ; ಯಾವೆಲ್ಲ ಅಂಗಡಿಗಳು ಓಪನ್ ಇರುತ್ತೆ ಗೊತ್ತಾ..?

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ಲಾಕ್ ಡೌನ್ ಸಡಿಲ; ಯಾವೆಲ್ಲ ಅಂಗಡಿಗಳು ಓಪನ್ ಇರುತ್ತೆ ಗೊತ್ತಾ..?

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲೆ ಆರೆಂಜ್ ಝೋನ್ ನಿಂದ ಗ್ರೀನ್ ಝೋನ್ ಬಂದಿದ್ದು, ಈ ಹಿನ್ನೆಲೆ ರಾಜ್ಯ ಸರ್ಕಾರ ಗ್ರೀನ್ ಝೋನ್ ನಲ್ಲಿರುವ  ನಗರಗಳಲ್ಲಿ ಲಾಕ್ ಡೌನ್ ನಿಯಮ ಸಡಿಲಿಸಿದೆ. ಈ ಮೂಲಕ  ಅಂಗಡಿ ಮುಗ್ಗಟು ತೆರೆಯಲು ಜಿಲ್ಲಾಧಿಕಾರಿಗಳು ಅವಕಾಶ ನೀಡಿದ್ದಾರೆ.

ಮೇ 3 ರವರೆಗೆ ಲಾಕ್‍ಡೌನ್ ಅವಧಿ ಇರಲಿದ್ದು, ಆಯ್ದ ಕೆಲವು ವಾಣಿಜ್ಯ ಚಟುವಟಿಕೆಗಳನ್ನು ಆರಂಭಿಸಲು ಷರತ್ತುಬದ್ದ ಅನುಮತಿಯನ್ನು ನೀಡಲಾಗಿದೆ. ಹವಾನಿಯಂತ್ರಿತ ಸಲಕರಣಗಳನ್ನು ಉಪಯೋಗಿಸದೇ, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಾಣಿಜ್ಯ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ.

ಏನು ಇರುತ್ತೆ 

ಪುಸ್ತಕ-ಲೇಖನ ಸಾಮಗ್ರಿ ಮತ್ತು ಜೆರಾಕ್ಸ್ ಅಂಗಡಿಗಳು, ಕನ್ನಡಕದ ಅಂಗಡಿಗಳು, ಹಾರ್ಡ್‍ವೇರ್, ಫ್ಲೇ-ವುಡ್, ಕಬ್ಬಿಣ, ಸಿಮೆಂಟ್ ಹಾಗೂ ಬಣ್ಣದ ಅಂಗಡಿಗಳು, ಇಟ್ಟಿಗೆ ಭಟ್ಟಿಗಳು, ರೈಸ್‍ಮಿಲ್ ಮತ್ತು ಫ್ಲೋರ್ ಮಿಲ್, ಫೋಟೊ ಸ್ಟುಡಿಯೋಗಳು, ಆಯಿಲ್ ಮಿಲ್, ಎಲೆಕ್ಟ್ರಿಕಲ್ ಶಾಪ್, ಪಾದರಕ್ಷೆ ಅಂಗಡಿಗಳು, ಮರಳು ಮತ್ತು ಕಲ್ಲು ಗಣಿಗಾರಿಕೆ ಹಾಗೂ ಕ್ರಷರ್‍ಗಳು, ಟೈರ್ ಮತ್ತು ಟ್ಯೂಬ್ ಅಂಗಡಿಗಳು, ಫ್ಯಾನ್ಸಿ ಸ್ಟೋರ್ಸ್/ಜನರಲ್ ಸ್ಟೋರ್ಸ್/ಸ್ಟೇಷನರಿ ಅಂಗಡಿಗಳು, ಸಾಮಿಲ್‍ಗಳು, ಕೃಷಿ ಮತ್ತು ತೋಟಗಾರಿಕೆಗೆ ಸಂಬಂಧಿಸಿ ಪರಿಕರಗಳನ್ನು ಒದಗಿಸುವ ಟಾರ್ಪಲಿನ್ ಅಂಗಡಿಗಳು, ಆಟೋಮೊಬೈಲ್ ಅಂಗಡಿಗಳು, ಮುದ್ರಣಾಲಯಗಳು, ನೋಂದಣಿ ಕಾರ್ಯಕ್ಕಾಗಿ ಸಬ್ ರಿಜಿಸ್ಟ್ರಾರ್ ಕಚೇರಿಗಳು, ನಗರ ಪ್ರದೇಶಗಳಲ್ಲಿ ಕಟ್ಟಡ ಕಾಮಗಾರಿ ಚಟುವಟಿಕೆಗಳು ಸ್ಥಳೀಯವಾಗಿ ಕಾರ್ಮಿಕರು ಲಭ್ಯವಿದ್ದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿರುತ್ತದೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆಯ ಕಲಂ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರವರೆಗೆ ಕಾನೂನುಗಳನ್ವಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

ವೈದ್ಯಕೀಯ ಮತ್ತು ಪಶು ವೈದ್ಯಕೀಯ ಸೇರಿದಂತೆ ತುರ್ತು ಸೇವೆಯ ಖಾಸಗಿ ವಾಹನಗಳು ಮತ್ತು ಅಗತ್ಯ ಸೇವೆಗಳು, ಸಾಮಗ್ರಿಗಳನ್ನು ಒದಗಿಸುವ ಹಾಗೂ ಕರ್ತವ್ಯಕ್ಕೆ ತೆರಳುವವರಿಗೆ ಸಂಬಂಧಿಸಿದಂತೆ ದ್ವಿಚಕ್ರ ವಾಹನದಲ್ಲಿ ಒಬ್ಬ ಸವಾರರು ಮತ್ತು ನಾಲ್ಕು ಚಕ್ರದ ವಾಹನಗಳಲ್ಲಿ ವಾಹನ ಚಾಲಕರೊಂದಿಗೆ ಒಬ್ಬರಿಗೆ ಮಾತ್ರ ಸಂಚರಿಸಲು ಅವಕಾಶವಿದೆ. ಈ ನಿಯಮವನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹನುಮಂತರಾಯ ಮಾತನಾಡಿ, ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿದೆ. ಜನರಿಗೆ ಆರ್ಥಿಕ ವ್ಯವಸ್ಥೆಗಳಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಸಾರ್ವಜನಿಕವಾಗಿ ಮೇ 3 ರವರೆಗೆ ಗುಂಪು ಸೇರುವಂತಿಲ್ಲ. ನಗರದಲ್ಲಿ ಯಾವುದೆ ಜವಳಿ ಹಾಗೂ ಜ್ಯುವೆಲ್ಲರಿ ಅಂಗಡಿ ತೆರೆಯಲು ಅವಕಾಶವಿರುವುದಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ, ತಂಬಾಕು ಉಗುಳಿದರೆ ಕರ್ನಾಟಕ ಪೊಲೀಸ್ ಆಕ್ಟ್ ಕಾಯ್ದೆ ಅನ್ವಯ ಶಿಕ್ಷೆಗೆ ಒಳಗಾಗುತ್ತಾರೆ. ಇಂತಹ ಅಪರಾಧಗಳಿಗೆ ದಂಡ ವಿಧಿಸಲಾಗುವುದು ಎಂದರು.
ಕೃಷಿ, ಮಾರುಕಟ್ಟೆ, ಸಬ್ ರಿಜಿಸ್ಟಾರ್ ಆಫೀಸ್, ಎಪಿಎಂಸಿ ಮಾರುಕಟ್ಟೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲೆಯಲ್ಲಿ ವಿವಿಧ ರೀತಿಯ ಅಂಗಡಿಗಳು ಸೇರಿದಂತೆ ಒಟ್ಟು 13 ಸಾವಿರ ಅಂಗಡಿಗಳು ನೊಂದಣಿ ಮಾಡಿವೆ. ಇನ್ನಿಳಿದ 3 ಸಾವಿರ ಅಂಗಡಿಗಳು ನೊಂದಣಿ ಆಗಬೇಕಿದೆ ಎಂದರು.
ಸಾರ್ವಜನಿಕ ಸ್ಥಳಗಳಲ್ಲಿ ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ವ್ಯವಹಾರ ಮಾಡುವುದು ಕಂಡು ಬಂದಲ್ಲಿ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದು ಮಾಡಿ, ಶಿಸ್ತು ಕ್ರಮ ಜರುಗಿಸಲಾಗುವುದು ಎಂದರು. ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ಪಾನಿಪುರಿ, ಎಗ್ರೈಸ್, ಗೋಬಿ ಅಂಗಡಿಗಳನ್ನು ತೆರೆಯಲು ಅವಕಾಶವಿರುವುದಿಲ್ಲ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top