ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಮದ್ಯ ಮಾರಾಟ ಹಾಗೂ ಮದ್ಯ ಸರಬರಾಜು ನಿಷೇಧಿಸಲಾಗಿದೆ. ಆದರೆ, ಕೆಲವು ಸಮಾಜಘಾತುಕ ವ್ಯಕ್ತಿಗಳು ದಾವಣಗೆರೆ ಜಿಲ್ಲೆಯಾದ್ಯಂತ ಸ್ಪಿರಿಟ್ (ಮದ್ಯಸಾರ) ನ್ನು ಬಳಸಿ ನಕಲಿ ಮದ್ಯ ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ಅಬಕಾರಿ ಇಲಾಖೆಯ ಗಮನಕ್ಕೆ ಬಂದಿದೆ.
ನಕಲಿ ಮದ್ಯ, ಕಳ್ಳಭಟ್ಟಿ ಸಾರಾಯಿ ಸೇವನೆಯಿಂದ ಮನಷ್ಯನ ಆರೋಗ್ಯವು ಹಾಳಾಗಿ ಲಿವರ್, ಕಿಡ್ನಿ ಇತರೆ ಅಂಗಾಂಗ ವೈಫಲ್ಯತೆಯುಂಟಾಗಿ ಸಾವಿಗೀಡಾಗುವ ಸಂಭವವಿದೆ. ಆದ್ದರಿಂದ ಅಕ್ರಮವಾಗಿ ಮಾರಾಟ ಮಾಡುವ ನಕಲಿ ಮದ್ಯ,ಕಳ್ಳಭಟ್ಟಿ ಸಾರಾಯಿಯನ್ನು ಸಾರ್ವಜನಿಕರು ಸೇವಿಸಬಾರದು. ಇಂತಹ ನಕಲಿ ವ್ಯವಹಾರಗಳು ಕಂಡುಬಂದಲ್ಲಿ ಅಬಕಾರಿ ಇಲಾಖೆಯ ಕಂಟ್ರೋಲ್ ರೂಂ ದೂರಾವಾಣಿ ಸಂಖ್ಯೆ 08192-235316 ಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾ ಅಬಕಾರಿ ಇಲಾಖೆಯ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



