ಡಿವಿಜಿ ಸುದ್ದಿ, ದಾವಣಗೆರೆ: ರಾಜ್ಯ ಸರ್ಕಾರವು ಕೋವಿಡ್ 19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಲಾಕ್‍ಡೌನ್ ಮಾರ್ಗಸೂಚಿ ಪ್ರಕಾರ 31 ರವರೆಗೆ ಭಾನುವಾರದಂದು ಸಂಪೂರ್ಣ ಲಾಕ್‍ಡೌನ್ ಇರಲಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಪ್ರತಿದಿನ ರಾತ್ರಿ 7 ರಿಂದ ಬೆಳಿಗ್ಗೆ 7 ರವರೆಗೆ ಎಲ್ಲಾ ಅವಶ್ಯಕವಲ್ಲದ ಚಟುವಟಿಕೆಗಳ ವ್ಯಕ್ತಿಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಭಾನುವಾರದಂದು ಹೆಚ್ಚುವರಿಯಾಗಿ ಬೆಳಿಗ್ಗೆ 7 ರಿಂದ ಸಂಜೆ ರವರೆಗೆ ಸಹ ಎಲ್ಲಾ ಅವಶ್ಯಕವಲ್ಲದ ವ್ಯಕ್ತಿಗಳ ಸಂಚಾರನ್ನು ನಿಷೇಧಿಸಿದೆ. ಸಿಆರ್‍ಪಿಸಿ ಸೆಕ್ಷನ್ 144 ಅಡಿಯಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.
ಈ ಹಿಂದೆಯೇ ನಿಗದಿಪಡಿಸಿರುವ ಮದುವೆಗಳಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಸಾಮಾಜಿಕ ಅಂತರವನ್ನು ಖಾತರಿಪಡಿಸಿಕೊಂಡು ಗರಿಷ್ಟ ಅತಿಥಿಗಳ ಸಂಖ್ಯೆಯನ್ನು 50 ಕ್ಕೆ ಸೀಮಿತಗೊಳಿಸಿ ರಾಷ್ಟ್ರೀಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಸರಳವಾಗಿ ಮದುವೆ ಸಮಾರಂಭವನ್ನು ನಡೆಸಲು ಅನುಮತಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.



