ಡಿವಿಜಿ ಸುದ್ದಿ, ದಾವಣಗೆರೆ: ಮಾಗನೂರು ಬಸಪ್ಪ ಪಬ್ಲಿಕ್ ಟ್ರಸ್ಟ್ ನ ಶ್ರೀಮತಿ ಸರ್ವಮಂಗಳಮ್ಮ ಮಾಗನೂರು ಬಸಪ್ಪ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ತರಗತಿಗಳು ಆರಂಭವಾಗಿದ್ದು, ಶಾರದ ಪೂಜಾ ಮೂಲಕ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಪ್ರೇಮ ಪಿ.ಎಂ ಪ್ರಸ್ತಾವಿಕ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಗನೂರು ಬಸಪ್ಪ ಟ್ರಸ್ಟ್ ಕಾರ್ಯದರ್ಶಿ ಎಂ.ಬಿ. ಸಂಗಮೇಶ್ ಗೌಡ್ರು ವಹಿಸಿದ್ದರು.





