ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಭಾರೀ ಚೇತರಿಕೆ ಕಂಡರೂ ಅಧಿಕಾರ ಚುಕ್ಕಾಣಿ ಹಿಡಿಯುವಲ್ಲಿ ವಿಫಲವಾಗಿದೆ. ಕಾಂಗ್ರೆಸ್ ಪಕ್ಷಕ್ಕೆ ಹಿನ್ನೆಡೆಯಾಗಿದ್ದರೂ ಪಾಲಿಕೆಯಲ್ಲಿ ಮತ್ತೆ ಅಧಿಕಾರ ತನ್ನಲ್ಲಿಯೇ ಉಳಿಸಿಕೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ.
45 ವಾರ್ಡ್ ಗಳಲ್ಲಿ ಕಾಂಗ್ರೆಸ್ 22, ಬಿಜೆಪಿ 17, ಜೆಡಿಎಸ್ 01, ಪಕ್ಷೇತರರು 05 ಕ್ಷೆತ್ರಗಳಲ್ಲಿ ಗೆಲುವ ಸಾಧಿಸಿದ್ದಾರೆ. ಮ್ಯಾಜಿಕ್ ನಂಬರ್ 23 ವಾಗಿದ್ದು, ಒಬ್ಬ ಪಕ್ಷೇತರ ಬೆಂಬಲ ನೀಡಿದರೂ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ಕಾಂಗ್ರೆಸ್ ಪಕ್ಷಕ್ಕೆ ಪಾಲಿಕೆಯ ಅಧಿಕಾರ ಹಿಡಿಯುವ ಎಲ್ಲಾ ಸಾಧ್ಯತೆ ಹೆಚ್ಚಿದೆ.

ಕಳೆದ ಬಾರಿಯ ಚುನಾವಣೆಯಲ್ಲಿ ಒಟ್ಟು 41 ವಾರ್ಡ್ ಗಳಲ್ಲಿ ಕಾಂಗ್ರೆಸ್ 39 ಸ್ಥಾನ ಗೆಲ್ಲುವ ಮೂಲಕ ವಿರೋಧ ಪಕ್ಷಕ್ಕೂ ಸ್ಥಾನ ಇಲ್ಲದಂತೆ ಗೆದ್ದು ಬೀಗಿತ್ತು. ಕಳೆದ ಸಲ ಕೇವಲ 01 ಸ್ಥಾನಕ್ಕೆ ತೃಪ್ತಿಪಟ್ಟಿದ್ದ ಬಿಜೆಪಿ ಈ ಬಾರಿ 17 ಸ್ಥಾನ ಗೆಲ್ಲುವ ಮೂಲಕ ಭಾರೀ ಜಿಗಿತ ಕಂಡಿದೆ.

ಬಿಜೆಪಿಗೆ ಬಂಡಾಯದ್ದೆ ಭಾರೀ ಬಿಸಿ
ಈ ಬಾರಿ ಏನಾದ್ರೂ ಮಾಡಿ ಅಧಿಕಾರ ಗದ್ದುಗೆ ಹೇರಬೇಕು ಎಂದುಕೊಂಡಿದ್ದ ಬಿಜೆಪಿಗೆ ಬಂಡಾಯ ಅಭ್ಯರ್ಥಿಗಳು ಭಾರೀ ಹೊಡೆತ ಕೊಟ್ಟಿದ್ದರು. 15 ಕ್ಕೂ ಹೆಚ್ಚು ಕಡೆ ಬಿಜೆಪಿ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದರೂ, ಬಂಡಾಯ ಬಿಜೆಪಿ ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಉಚ್ಚಾಟನೆ ಮಾಡಿದರೂ ಪ್ರಯೋಜನವಾಗಿಲ್ಲ.



