ಡಿವಿಜಿ ಸುದ್ದಿ, ದಾವಣಗೆರೆ: ಶಾಸಕರಾದ ಶಾಮನೂರು ಶಿವಶಂಕರಪ್ಪ ಅವರ ನೇತೃತ್ವದಲ್ಲಿ ನಮ್ಮ ವಾರ್ಡ್ ನಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಇನ್ನುಳಿದ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಕುರುಬರ ಕೇರಿಯ ಕಾಂಗ್ರೆಸ್ ಅಭ್ಯರ್ಥಿ ಎಸ್. ಮಲ್ಲಿಕಾರ್ಜುನ ಹೇಳಿದರು.
ನಮ್ಮ ವಾರ್ಡ್ ನಲ್ಲಿನ ಎಲ್ಲಾ ಸಮುದಾಯಗಳಲ್ಲಿಸೌಹಾರ್ದಯುತ ವಾತಾವರಣ ನಿರ್ಮಿಸಿ, ವಾರ್ಡ್ ಅಭಿವೃದ್ಧಿಯತ್ತ ಹೆಚ್ಚಿನ ಗಮನಹರಿಸುತ್ತೇನೆ. ಇದರ ಜೊತೆಗೆ ಅಗತ್ಯ ಮೂಲ ಸೌಕರ್ಯಗಳಾದ ನೀರು, ವಿದ್ಯುತ್, ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದರು. ಈ ಬಗ್ಗೆ ಡಿವಿಜಿ ಸುದ್ದಿ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು ಹೀಗೆ…



