ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಭಗತ್ ಸಿಂಗ್ ವಾರ್ಡ್ ಕಾಂಗ್ರೆಸ್ ಅಭ್ಯರ್ಥಿ ಜೆ ಎನ್ ಶ್ರೀನಿವಾಸ್ ಇವತ್ತು ಭರ್ಜರಿ ಪ್ರಚಾರ ಮಾಡಿದರು. ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಾರ್ಡ್ ನಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿದ್ದು, ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಬೇಕಿದೆ. ಕುಡಿಯುವ ನೀರು ಮತ್ತು ರಾಜಕಾಲುವೆ ಸಮಸ್ಯೆ ಮುಖ್ಯವಾಗಿದೆ. ಈ ಎರಡು ಸಮಸ್ಯೆ ಬಗೆಹರಿಸಲು ಮೊದಲ ಆದ್ಯತೆ ನೀಡುತ್ತೇನೆ.
ನಮ್ಮ ವಾರ್ಡ್ ನಲ್ಲಿ ಕೌಲಶ ತರಬೇತಿ ಕೇಂದ್ರ ಮತ್ತು ಸ್ವಯಂ ಉದ್ಯೋಗ ತರಬೇತಿ ಕೇಂದ್ರ ತೆರೆಯಬೇಕು ಎನ್ನುವ ಆಸೆ ಇದೆ. ಈ ಬಾರಿ ಚುನಾವಣೆಯಲ್ಲಿ ಬಹುಮತದಿಂದ ಗೆದ್ದು ವಾರ್ಡ್ ಮೂಲ ಸಮಸ್ಯೆ ಬಗೆಹರಿಸಲು ಮೊದಲ ಆದ್ಯತೆ ನೀಡುತ್ತೇನೆ ಎಂದರು.