ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಮತದಾರ ಪಟ್ಟಿಯಲ್ಲಿ ಬಿಜೆಪಿ ಅಕ್ರಮವಾಗಿ 8 ಎಂಎಲ್ಸಿಗಳನ್ನು ಸೇರಿಸಿ ಚುನಾವಣೆ ನಡೆಸಿದ್ದು, ಈ ಪ್ರಕರಣ ಹೈ ಕೋರ್ಟ್ ನಲ್ಲಿದೆ. ತೀರ್ಪು ಬರುವ ಮುನ್ನವೇ ಜಿಲ್ಲಾಧಿಕಾರಿ ಮತದಾರ ಪಟ್ಟಿಯಲ್ಲಿನ ಅಕ್ರಮ ಕುರಿತು ಇಬ್ಬರು ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದು, ಅಕ್ರಮ ಸಾಬೀತಾದಂತಾಗಿದೆ. ಹೀಗಾಗಿ ಮೇಯರ್ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.19 ರಂದು ನಡೆದ ಮೇಯರ್, ಉಪಮೇಯರ್ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಅಕ್ರಮವಾಗಿ 8 ಎಂಎಲ್ಸಿ ಗಳನ್ನು ಮತದಾರ ಪಟ್ಟಿಯಲ್ಲಿ ಸೇರಿಸಿದೆ. ಈ ಮೂಲಕ ಅಧಿಕಾರ ಹಿಡಿದಿದೆ. ಬಿಜೆಪಿಯ ಕುಮ್ಮಕ್ಕಿನಿಂದ ಜಿಲ್ಲಾಡಳಿತ, ಪ್ರಾದೇಶಿಕ ಆಯುಕ್ತರು ಚುನಾವಣೆ ಆಕ್ರಮದಲ್ಲಿ ಭಾಗಿಯಾಗಿದ್ಧಾರೆ. ಈ ಪ್ರಕರಣದ ತೀರ್ಪು ಬರುವ ಮುನ್ನವೇ ಜಿಲ್ಲಾಧಿಕಾರಿಗಳು ಕರ್ತವ್ಯ ಲೋಪದ ಹಿನ್ನೆಲೆ ಇಬ್ಬರು ಪಾಲಿಕೆ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದಾರೆ. ಹೀಗಾಗಿ ಈ ಚುನಾವಣೆ ಅಕ್ರಮವೆಂದು ಸಾಬೀತು ಆಗಿದ್ದು, ಮೇಯರ್ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿ ಮೂಗಿನ ನೇರಕ್ಕೆ ತಕ್ಕಂತೆ ಚುನಾವಣೆ ಅಧಿಕಾರಿಗಳು ನಡೆದುಕೊಂಡಿದ್ದಾರೆ. ಮೇಲಾಧಿಕಾರಿಗಳ ಒತ್ತಡಕ್ಕೆ ಮಣಿದು ಅಮಾಯಕ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದಾರೆ. ಹೀಗಾಗಿ 12 ಎಂಎಲ್ಸಿಗಳನ್ನು ಮತರಾದ ಪಟ್ಟಿಯಿಂದ ತಗೆದು ಹಾಕಿ 45 ಪಾಲಿಕೆ ಸದಸ್ಯರು , 2 ಶಾಸಕರು, 2 ವಿಧಾನ ಪರಿಷತ್ ಸಸ್ಯರು ಹಾಗೂ 1 ಸಂಸದರಿಗೆ ಮಾತ್ರ ಮತದಾನಕ್ಕೆ ಅವಕಾಶ ನೀಡಿ, ಮತ್ತೊಮ್ಮೆ ಚುನಾವಣೆ ನಡೆಸ ಬೇಕು ಎಂದು ಒತ್ತಾಯಿಸಿದರು.
ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಸದಸ್ಯರಿಗೆ ವಿಪ್ ಜಾರಿಗೊಳಿಸಲಾಗಿತ್ತು. ನಮ್ಮ ಪಕ್ಷದ ಮೂರು ಸದಸ್ಯರು ವಿಪ್ ಉಲ್ಲಂಘಿಸಿ ಮೇಯರ್ ಮತದಾನದಲ್ಲಿ ಭಾಗಿಯಾಗಿಲ್ಲ. ಅವರ ವಿರುದ್ಧ ಕೆಪಿಸಿಸಿ ಜಿಲ್ಲಾಧ್ಯಕ್ಷರು ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ .
ಡಿ- ಬಸವರಾಜ್, ಕೆಪಿಸಿಸಿ ಮಾಧ್ಯಮ ವಿಶ್ಲೇಷಕ
ಪಾಲಿಕೆ ಸದಸ್ಯ ಎ. ನಾಗರಾಜ ಮಾತನಾಡಿ, ಜಿಲ್ಲಾಧಿಕಾರಿಗಳು ಇಬ್ಬರು ಅಧಿಕಾರಿಗಳನ್ನು ಅಮಾನತ್ತು ಮಾಡುವ ಮೂಲಕ ನಮ್ಮ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ. ಈ ಎಲ್ಲಾ ವಿದ್ಯಾಮಾನಗಳನ್ನು ರಾಷ್ಟ್ರೀಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ದೇವರಮನೆ ಶಿವಕುಮಾರ್, ಅಬ್ದುಲ್ ಲತೀಫ್, ವಿನಾಯಕ ಪೈಲ್ವಾನ್, ಸೈಯದ್ ಚಾರ್ಲಿ, ಮಂಜುನಾಥ್ ಗಡಿಗುಡಾಳ್, ಕೆ. ಚಮನ್ ಸಾಬ್, ಹುಲ್ಮನಿ ಗಣೇಶ್, ಕಲ್ಲಳ್ಳಿ ನಾಗರಾಜ್, ಪಾಲಿಕೆ ಮಾಜಿ ಸದಸ್ಯ ಕೆ.ಜಿ ಶಿವಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.