ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ಮೇಯರ್ ಅಜಯ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಆಯ್ಕೆ ನಡೆಯಿತು.
ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರು
- ಎಸ್.ಟಿ. ವೀರೇಶ್ – ಪಟ್ಟಣ ಯೋಜನೆ ಮತ್ತು ಸುಧಾರಣೆ ಸ್ಥಾಯಿ ಸಮಿತಿ
- ಪ್ರಸನ್ನ ಕುಮಾರ್. ಕೆ- ಹಣಕಾಸು, ತೆರಿಗೆ ಮತ್ತು ಅಪೀಲು ಸ್ಥಾಯಿ ಸಮಿತಿ
- ಆರ್. ಜಯಮ್ಮ- ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ
- ಗೌರಮ್ಮಗಿರೀಶ್ – ಲೆಕ್ಕಪತ್ರ ಸ್ಥಾಯಿ ಸಮಿತಿ

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಮೇಯರ್ ಅಜಯ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದು , ಉಪ ಮೇಯರ್ ಆಗಿ ಸೌಮ್ಯ ನರೇಂದ್ರ ಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ.



