ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಐಗೂರು ಗ್ರಾಮದ ಜಯಪ್ಪ ಎಂಬ ರೈತನಿಗೆ ಸೇರಿದ ಸುಮಾರು 50 ಕ್ವಿಂಟಾಲ್ ಮೆಕ್ಕೆಜೋಳ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ನಗರಾಭಿವೃದ್ಧಿ, ಜಿಲ್ಲೆ ಉಸ್ತುವಾರಿ ಸಚಿವ ಬಿ.ಎ ಬಸವರಾಜ ಭೇಟಿ ನೀಡಿ ಪರಿಶೀಲಿಸಿ ವೈಯಕ್ತಿವಾಗಿ ರೂ. 50 ಸಾವಿರವನ್ನು ನೀಡಿದರು.
ಈ ವೇಳೆಯಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಮಾಯಕೊಂಡ ಶಾಸಕಾರದ ಪ್ರೊ. ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇದ್ದರು.



