ಡಿವಿಜಿ ಸುದ್ದಿ , ದಾವಣಗೆರೆ: ಕರ್ನಾಟಕ ಭೂ ಸುಧಾರಣಾ ಕಾಯ್ದೆಯಿಂದ ಯಾವುದೇ ಪ್ರಯೋಜನ ಇರಲಿಲ್ಲ. ಇದರಿಂದ ಎಸಿ ಸೇರಿದಂತೆ ಇತರೆ ಅಧಿಕಾರಿಗಳಿಗೆ ಹಣ ವಸೂಲಿ ಮಾಡಿಕೊಳ್ಳುವ ದಂಧೆಯಾಗಿತ್ತು. ಹೀಗಾಗಿ ಕಾಯ್ದೆ ತಿದ್ದುಪಡಿ ತರಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಈ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಭೂ ಸುಧಾರಣೆ ಕಾಯ್ದೆ ಜಾರಿಗೆ ತರುವಂತೆ ಜನರಿಂದ ದೂರು ಬಂದಿದ್ದವು. ಈ ಹಿನ್ನೆಲೆಯಲ್ಲಿ ಸಂಪುಟ ಸಭೆಯಲ್ಲಿ ಚರ್ಚಿಸಿ ತಿದ್ದುಪಡಿ ತರುವ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಎಂ.ಟಿ.ಬಿ. ನಾಗರಾಜ್ ಜೊತೆ ಎಚ್.ವಿಶ್ವನಾಥ್, ಆರ್.ಶಂಕರ್ ಹಾಗೂ ರೋಷನ್‌ಬೇಗ್ ಅವರಿಗೂ ಟಿಕೆಟ್ ನೀಡಬೇಕಿದೆ.
-ಸಚಿವ ಎಸ್.ಟಿ. ಸೋಮಶೇಖರ್
5 ಗುಂಟೆ ಜಮೀನು ಖರೀದಿ ಮಾಡಿದರೆ ಎರಡು ಮೂರು ತಿಂಗಳಲ್ಲಿ ನೋಟಿಸ್ ಕೊಡುತ್ತಿದ್ದರು. ಈ ಕಾಯ್ದೆ ಉಪಯೋಗವಿರಲಿಲ್ಲ. ಇದರಿಂದ ಸರ್ಕಾರ ಕಾಯ್ದೆಗೆ ತಿದ್ದುಪಡಿ ತಂದಿದೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಮಾತನಾಡಿ, ನೆರೆಯ ತಮಿಳುನಾಡು, ತೆಲಂಗಾಣ ಹಾಗೂ ಆಂಧ್ರಪ್ರದೇಶ ಸೇರಿದಂತೆ ಯಾವ ರಾಜ್ಯದಲ್ಲೂ ಈ ಕಾಯ್ದೆ ಜಾರಿ ಇಲ್ಲ. ಹೀಗಾಗಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದರು.



