ಡಿವಿಜಿ ಸುದ್ದಿ, ದಾವಣಗೆರೆ: ಹರಿಹರ ತಾಲ್ಲೂಕಿನ ಶಾಸಕ ಎಸ್. ರಾಮಪ್ಪ ಅವರು ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ ನೀಡಿದ ಸಹಾಯ, ಸಂಕಷ್ಟಕ್ಕೆ ಸ್ಪಂದಿಸಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪತ್ರದ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಒಬ್ಬರಿಂದ ಏನು ಮಾಡಲು ಸಾಧ್ಯವಿಲ್ಲ. ಎಲ್ಲರ ಸಹಕಾರ ಮುಖ್ಯ. ಈ ನಿಟ್ಟಿನಲ್ಲಿ ನೀವು ನಿಮ್ಮ ಕ್ಷೇತ್ರದಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದೀರಿ ಎನ್ನುವ ವಿಷಯ ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ನಿಮ್ಮ ಸಹಕಾರ ಇದೇ ರೀತಿ ಮುಂದುವರಿಯಲಿ. ನಿಮ್ಮ ಎಲ್ಲರ ಸಹಕಾರ ಇದ್ದರೆ, ಎಂತಹದ್ದೇ ಸಮಸ್ಯೆ ಬಂದರೂ ಎದುರಿಸಬಹುದು ಎಂದು ಯಡಿಯೂರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೊರೊನಾ ವೈರಸ್ ಬಗ್ಗೆ ಜಾಗೃತಿ ವಹಿಸುವಂತೆ ಸಾರ್ವಜನಿಕರಲ್ಲಿ ಸೂಚನೆ ನೀಡಿ. ಈ ಬಾರಿಯ ಬೇಸಿಗೆಯನ್ನು ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇದಕ್ಕಾಗಿ ಅನುದಾನವನ್ನು ಸಹ ಬಿಡುಗಡೆ ಮಾಡಿದ್ದೇನೆ. ಹಾಗೆಯೇ ಸರ್ಕಾರ ಸೂಚಿಸಿದ ಮಾರ್ಗ ಸೂಚಿಯನ್ನು ಸರಿಯಾಗಿ ಪಾಲನೆ ಮಾಡಬೇಕು. ಸಾಮಾಜಿಕ ಅಂತರ ಕಾಪಡಿಕೊಳ್ಳಬೇಕು. ಅಗತ್ಯ ವಸ್ತುಗಳು ಸಾರ್ವಜನಿಕರಿಗೆ ಸರಿಯಾಗಿ ತಲುಪಿದೆಯಾ ಎಂಬುದನ್ನು ಗಮನಿಸಿ ಎಂದು ಶಾಸಕ ರಾಮಪ್ಪ ಅವರಿಗೆ ಸಿಎಂ ಸೂಚಿಸಿದ್ದಾರೆ.




