Connect with us

Dvgsuddi Kannada | online news portal | Kannada news online

ಹರಿಹರ ಶಾಸಕ ಎಸ್. ರಾಮಪ್ಪ ಸೇವೆಗೆ ಪತ್ರದ ಮೂಲಕ ಅಭಿನಂದನೆ ಸಲ್ಲಿಸಿದ ಸಿಎಂ ಯಡಿಯೂರಪ್ಪ

ಪ್ರಮುಖ ಸುದ್ದಿ

ಹರಿಹರ ಶಾಸಕ ಎಸ್. ರಾಮಪ್ಪ ಸೇವೆಗೆ ಪತ್ರದ ಮೂಲಕ ಅಭಿನಂದನೆ ಸಲ್ಲಿಸಿದ ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ, ದಾವಣಗೆರೆ: ಹರಿಹರ ತಾಲ್ಲೂಕಿನ ಶಾಸಕ ಎಸ್. ರಾಮಪ್ಪ ಅವರು  ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ ನೀಡಿದ ಸಹಾಯ, ಸಂಕಷ್ಟಕ್ಕೆ ಸ್ಪಂದಿಸಿದ್ದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪತ್ರದ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

food kit s ramapp dvgsuddi

ಕೊರೊನಾದಂತಹ ಸಂಕಷ್ಟದ ಸಮಯದಲ್ಲಿ ಒಬ್ಬರಿಂದ  ಏನು ಮಾಡಲು ಸಾಧ್ಯವಿಲ್ಲ. ಎಲ್ಲರ ಸಹಕಾರ ಮುಖ್ಯ. ಈ ನಿಟ್ಟಿನಲ್ಲಿ ನೀವು ನಿಮ್ಮ ಕ್ಷೇತ್ರದಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ್ದೀರಿ ಎನ್ನುವ ವಿಷಯ ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ನಿಮ್ಮ ಸಹಕಾರ ಇದೇ ರೀತಿ ಮುಂದುವರಿಯಲಿ. ನಿಮ್ಮ ಎಲ್ಲರ ಸಹಕಾರ ಇದ್ದರೆ, ಎಂತಹದ್ದೇ ಸಮಸ್ಯೆ ಬಂದರೂ ಎದುರಿಸಬಹುದು ಎಂದು ಯಡಿಯೂರಪ್ಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

s ramappa

ಕೊರೊನಾ ವೈರಸ್ ಬಗ್ಗೆ ಜಾಗೃತಿ ವಹಿಸುವಂತೆ ಸಾರ್ವಜನಿಕರಲ್ಲಿ ಸೂಚನೆ ನೀಡಿ. ಈ ಬಾರಿಯ ಬೇಸಿಗೆಯನ್ನು ಎದುರಿಸಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಇದಕ್ಕಾಗಿ ಅನುದಾನವನ್ನು ಸಹ ಬಿಡುಗಡೆ ಮಾಡಿದ್ದೇನೆ. ಹಾಗೆಯೇ ಸರ್ಕಾರ ಸೂಚಿಸಿದ ಮಾರ್ಗ ಸೂಚಿಯನ್ನು ಸರಿಯಾಗಿ ಪಾಲನೆ ಮಾಡಬೇಕು. ಸಾಮಾಜಿಕ ಅಂತರ ಕಾಪಡಿಕೊಳ್ಳಬೇಕು. ಅಗತ್ಯ ವಸ್ತುಗಳು  ಸಾರ್ವಜನಿಕರಿಗೆ ಸರಿಯಾಗಿ ತಲುಪಿದೆಯಾ ಎಂಬುದನ್ನು ಗಮನಿಸಿ ಎಂದು ಶಾಸಕ ರಾಮಪ್ಪ ಅವರಿಗೆ ಸಿಎಂ ಸೂಚಿಸಿದ್ದಾರೆ.

0fcdce2c bc7d 47cd 93ca eef1833dd0a9

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top