ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯ ಕಂಟೈನ್‍ಮೆಂಟ್ ಜೋನ್‍ಗಳಲ್ಲಿ ಹಣದ ಅಗತ್ಯತೆ ಪೂರೈಸುವ ದೃಷ್ಠಿಯಿಂದ ಪಿ.ಬಿ. ಮುಖ್ಯ ರಸ್ತೆಯಲ್ಲಿರುವ ಎಸ್‍ಬಿಐ ಶಾಖೆಯ ವತಿಯಿಂದ ಸಂಚಾರಿ (ಮೊಬೈಲ್ ) ಎಟಿಎಂ ವಾಹನಕ್ಕೆ ಜಿಲ್ಲಾಧಿಕಾರಿ ಮಾಹಂತೇಶ ಬೀಳಗಿ ಚಾಲನೆ ನೀಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿನ ಪರಿಣಾಮದಿಂದಾಗಿ ಸೀಲ್‍ಡೌನ್ ಪ್ರದೇಶಗಳಲ್ಲಿ ದೈನಂದಿನ ಹಣಕಾಸಿನ ವ್ಯವಹಾರಕ್ಕೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಸಂಚಾರಿ ಎಟಿಎಂಗೆ ಚಾಲನೆ ನೀಡಲಾಗಿದೆ. ರ
ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಮೊಬೈಲ್ ಎಟಿಎಂಗೆ ಬಹಳಷ್ಟು ಬೇಡಿಕೆ ಇಟ್ಟಿದ್ದೆವು. ಇದೀಗ ಸೇವೆ ಒದಗಿದ್ದು, ಕಂಟೈನ್‍ಮೆಂಟ್ ಝೋನ್‍ಗಳಲ್ಲಿನ ಜನರಿಗೆ ಸಹಾಯವಾಗಲಿದೆ. ಇದರ ಮೂಲಕ ಜಿಲ್ಲೆಯ ಇತಿಹಾಸದಲ್ಲಿ ಈ ಸೇವೆ ಹೆಸರಾಗಲಿ ಎಂದು ಬ್ಯಾಂಕ್ ಅಧಿಕಾರಿಗಳಿಗೆ ಶುಭ ಹಾರೈಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್ ಹಾಗೂ ಎಸ್‍ಬಿಐ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.



