ನ್ಯಾಮತಿ: ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ಮುಚ್ಚಿಡುವ ವಿಷಯವೂ ಅಲ್ಲ. ಯಾರೊಬ್ಬರು ಆತಂಕವೂ ಪಡಬೇಕಿಲ್ಲ. ಆಸ್ಪತ್ರೆಗೆ ತೋರಿಸಿಕೊಂಡು ಗುಣಮುಖರಾಗುವುದು ಎಲ್ಲರ ಕರ್ತವ್ಯವಾಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಹೇಳಿದರು.

ನ್ಯಾಮತಿ ತಾಲ್ಲೂಕಿನ ಸುರುಹೊನ್ನೆ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಹಾಗೂ ವಾಣಿಜ್ಯ ಕಟ್ಟಡ ಮೇಲಂತಸ್ತು ಮಳಿಗೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೊರೊನಾ ಬಂದವರು ವಯಸ್ಸಾದವರನ್ನು, ಗರ್ಭಿಣಿ ಸ್ತ್ರೀಯರನ್ನು ಹಾಗೂ ಸಣ್ಣ ಮಕ್ಕಳನ್ನು ಮುಟ್ಟುವುದು ಸರಿಯಲ್ಲ. ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುವುದಿಲ್ಲ. ಹೀಗಾಗಿ ಬಹಳ ಜಾಗೃತಿಯಿಂದ ಇರಬೇಕು. ಬಹುಶಃ ಕೊರೊನಾ ತೊಲಗುವವರೆಗೂ ಬಹಳಷ್ಟು ಎಚ್ಚರಿಕೆ ವಹಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲೆಯನ್ನು ಕೊರೊನಾ ಮುಕ್ತವಾಗಿಸಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ ತಾಲ್ಲೂಕಿನಲ್ಲಿಯೂ ಕೂಡ ಕೊರೊನಾ ಕೇಸ್ ಪತ್ತೆಯಾಗುತ್ತಿವೆ. ಆದ್ದರಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮಾಸ್ಕ್ ಹಾಕಿಕೊಂಡು ಓಡಾಡಬೇಕು. ಯಾರೊಬ್ಬರು ಸಮ್ಮನೆ ಓಡಾಡವುದು, ಹರಟೆ ಹೊಡೆಯುವುದು ಜೊತೆಗೆ ಗುಂಪು ಕಟ್ಟುವುದು ಮಾಡಬಾರದು. ಇದರಿಂದ ಕೊರೊನಾ ಸಂಖ್ಯೆ ಹೆಚ್ಚಾಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ ಎಂದರು.

ಆರ್ಥಿಕವಾಗಿ ಸಂಕಷ್ಟದಲ್ಲಿದ್ದರೂ ಸಹ ಕೋಟ್ಯಂತರ ರೂಪಾಯಿ ಮೊತ್ತದ ಕಾಮಗಾರಿಗೆ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳಲ್ಲಿ ಚಾಲನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಶಾಸಕರ ಜೊತೆ ಸೇರಿಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು ಎಂದು ಭರವಸೆ ನೀಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಶೇಷವಾಗಿ ರೂ. 1.70 ಲಕ್ಷ ಕೋಟಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಹಣ ಬಿಡುಗಡೆ ಮಾಡಿದ್ದಾರೆ. ತದನಂತರ ರೂ.20 ಲಕ್ಷ ಕೋಟಿ, ಕೇಂದ್ರ ಸರ್ಕಾರದ ಅರ್ಧ ಬಜೆಟ್ ಹಣವನ್ನು ಕೊರೊನಾ ಸಂಕಷ್ಟದಲ್ಲಿ ಸಿಲುಕಿದ್ದ ರೈತರು, ಸಣ್ಣ ಉದ್ದಿಮೆ ಹಾಗೂ ಕಾರ್ಮಿಕರು ಸೇರಿದಂತೆ ಅನೇಕ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದರು.

ಹಣ ಮುಖ್ಯವಲ್ಲ. ಹಣಕ್ಕಿಂತ ಜೀವ ಮುಖ್ಯ. ಅದಕ್ಕಾಗಿ ಮೋದಿಯವರು ರೈತರಿಗೆ, ಅಸಂಘಟಿತ ಕಾರ್ಮಿಕರಿಗೆ ಪ್ರೋತ್ಸಾಹಧನ ನೀಡಿದ್ದಾರೆ. ಉಜ್ವಲ್ ಯೋಜನೆಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ಒದಗಿಸಿದ್ದಾರೆ. ಜೊತೆಗೆ ಜನ್‍ಧನ್ ಯೋಜನೆಯಡಿಯಲ್ಲಿ ಖಾತೆಗೆ ಹಣ ಜಮಾ ಮಾಡಲಾಗಿದೆ ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಮತ್ತು ಶಾಸಕರಾದ ಎಂ.ಪಿ.ರೇಣುಕಾಚಾರ್ಯ ಮಾತನಾಡಿ, ಸುರುಹೊನ್ನೆ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ಹಾಗೂ ವಾಣಿಜ್ಯ ಕಟ್ಟಡ ಮೇಲಂತಸ್ತು ಮಳಿಗೆಗಳ ಉದ್ಘಾಟನೆ ಸೇರಿದಂತೆ, 95 ಲಕ್ಷದ ಸಿಮೆಂಟ್ ಸಿಸಿ ರಸ್ತೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನು ಸರಳವಾಗಿ ಆಚರಿಸಲಾಗಿದೆ ಎಂದರು.

ಅವಳಿ ತಾಲ್ಲೂಕುಗಳಾದ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನಲ್ಲಿ 7 ಪ್ರಕರಣ ಬಂದು ವಾಸಿಯಾಗಿದ್ದು, ಇದೀಗ ಮತ್ತೆ 5 ಕೇಸ್ ಕಂಡುಬಂದಿದೆ. ಕೇವಲ ಪ್ರಧಾನಮಂತ್ರಿ, ಮುಖ್ಯಮಂತ್ರಿ, ಸರ್ಕಾರ ಹಾಗೂ ಅಧಿಕಾರಿಗಳು ಪಾಲಿಸುವುದಲ್ಲ. ಅದರೊಂದಿಗೆ ಜನರು ಎಚ್ಚೆತ್ತುಕೊಳ್ಳಬೇಕು. ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಸ್ವಯಂ ಪ್ರೇರಿತರಾಗಿ ಜನರು ಜಾಗೃತಿ ಹೊಂದಬೇಕು ಎಂದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಜನರ ಆರೋಗ್ಯ ದೃಷ್ಟಿಯಿಂದ ಹಲವಾರು ಕಾರ್ಯಕ್ರಮ ಘೋಷಣೆ ಮಾಡಿದೆ. ಈ ಕಾರ್ಯಕ್ರಮಗಳು ಯಶಸ್ವಿಯಾಗಲು ನಾಗರಿಕರ ಸಹಭಾಗಿತ್ವ ಮುಖ್ಯವಾಗಿದ್ದು, ಸಮಾಜದ ಸ್ವಾಸ್ಥ್ಯ ಕಾಪಾಡಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ಕೋರಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಡಿ.ಜಿ.ಶಾಂತನಗೌಡ, ಜಿಲ್ಲಾ ಪಂಚಾಯತ್ ಸದಸ್ಯರಾದ ಉಮಾ ಎಂ.ಪಿ.ರಮೇಶ್, ಎಂ.ಆರ್.ಮಹೇಶ್, ಸುರುಹೊನ್ನೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಿರಿಯಮ್ಮ, ಉಪಾಧ್ಯಕ್ಷ ಎಸ್.ಸದಾಶಿವಪ್ಪ ಮತ್ತಿತರರು ಹಾಜರಿದ್ದರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *