ಶಾಂತಿ , ಸೌಹಾರ್ದತೆಯಿಂದ ನಗರದೇವತೆ ದುರ್ಗಾಂಬಿಕಾ ಜಾತ್ರೆ ಆಚರಿಸಲು ಸಹಕರಿಸಿ: ಜಿಲ್ಲಾಧಿಕಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯ ಜನತೆ ಶಾಂತಿ ಮತ್ತು ಸೌಹರ್ದತೆಯಿಂದ  ನಗರದೇವತೆ ದುರ್ಗಾಂಬಿಕಾ ಜಾತ್ರೆ ಹಾಗೂ ವಿನೋಬನಗರದ ಚೌಡೇಶ್ವರಿ ಜಾತ್ರೆ ಆಚರಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮನವಿ ಮಾಡಿದರು.

ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನಗರದೇವತೆ ದುರ್ಗಾಂಬಿಕಾ ಜಾತ್ರೆ ಮಹೋತ್ಸವ ಕುರಿತಾದ ನಾಗರೀಕ ಸೌಹರ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಗರದ ಜನತೆ ಎಂದಿಗೂ ಶಾಂತಿ ಪ್ರಿಯರು. ಇಲ್ಲಿಯವರೆಗೂ ಯಾವದೇ ಅಹಿತಕರ ಘಟನೆ ನಡೆದಿಲ್ಲ. ಈ ಹಬ್ಬದಲ್ಲಿಯೂ ನಗರದ ಜನತೆ ಶಾಂತಿ ಕಾಪಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

dc

ಜಾತ್ರೆಗೆ 1.9 ಕೋಟಿಗಳನ್ನು  ವಿವಿಧ ಕಾಮಗಾರಿಗಳಿಗೆ ವಿನಿಯೋಗಿಸಲಾಗಿದೆ. ಮಹಿಳೆಯರು ಮತ್ತು ಮಕ್ಕಗಳ ಸುರಕ್ಷತೆಗಾಗಿ ಸಿಸಿಟಿವಿ, ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಹಾಗೂ ಭಕ್ತಾದಿಗಳಿಗಾಗಿ ಇ- ಟಾಯ್ಲೆಟ್ ವ್ಯವಸ್ಥೆ, ಚರಂಡಿ ಸ್ವಚ್ಚತೆ, ಸಾಂಕ್ರ್ರಾಮಿಕ ರೋಗ, ಹಂದಿಗಳು ಮತ್ತು ಸೊಳ್ಳೆಗಳನ್ನು ತಡೆಯುವ ನಿಟ್ಟಿನಲ್ಲಿ ಮಹಾನಗರಪಾಲಿಕೆಯಿಂದ ಕ್ರಮ ಕೈಗೊಳಲಾಗಿದೆ.

2017 ರ ಮೌಢ್ಯ ನಿಷೇಧ ಕಾಯ್ದೆ ಅನ್ವಯ ಪ್ರಾಣಿಬಲಿ ಕೊಡುವುದು ನೀಷೆಧವಿದೆ. ಒಂದು ವೇಳೆ ಅದು ಜಾತ್ರೆ ವೇಳೆ ದೇವಸ್ಥಾನದ ಆವರಣದಲ್ಲಿ ಕಂಡು ಬಂದಲ್ಲಿ ಆ ದೇವಸ್ಥಾನವನ್ನು ಮುಜಾರಾಯಿ ಇಲಾಖೆಯ ಅಧೀನಕ್ಕೆ ಒಳಪಡಿಸಲಾಗುವುದು. ಬೆಸ್ಕಾಂ ಅಧಿಕಾರಿಗಳು ಜಾತ್ರೆ ಮುಗಿಯುವವರೆಗೂ ವಿದ್ಯುತ್ ವ್ಯತ್ಯಯ ಆಗದಂತೆ ಕ್ರಮವಹಿಸಿ ಮತ್ತು ಅನುಭವವಿರುವ ಲೈನ್‍ಮ್ಯಾನ್‍ಗಳನ್ನು ನೇಮಿಸಿ ವಿದ್ಯುತ್ ವ್ಯತ್ಯಯ ಆಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.
ದೇವದಾಸಿ ಪದ್ದತಿ, ಬೇವಿನ ಉಡುಗೆ ತೊಡಿಸುವುದು ಮೌಡ್ಯ ಪದ್ದತಿಯಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ಇದರ ಬಗ್ಗೆ ಸೂಕ್ತವಾದ ಕ್ರಮ ಕೈಗೊಳಬೇಕು ಎಂದ ಅವರು ಜಿಲ್ಲಾಡಳಿತ ನಿಮ್ಮ ಜೊತೆ ಇದೆ ಎಂದು ಭರವಸೆ ನೀಡಿದರು.

durugambika devi

ಜಾತ್ರೆ ನಡೆಯುವ ಮಾ.3 ರ ಬೆಳಿಗ್ಗೆ 6 ಗಂಟೆಯಿಂದ ಯಿಂದ ಮಾ.4 ರ ರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟವನ್ನು ನೀಷೆಧ ಮಾಡಲಾಗಿದೆ. ಜಾತ್ರಾ ಮಹೋತ್ಸವಕ್ಕೆ 6 ರಿಂದ 7 ಲಕ್ಷ ಭಕ್ತಾದಿಗಳು ಆಗಮಿಸುತ್ತಿದ್ದು ಆ ಸ್ಥಳದಲ್ಲಿ ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಆಂಬುಲೆನ್ಸ್ ವ್ಯವಸ್ಥೆ ಹಾಗೂ ಒಂದು ಕೊಠಡಿ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಎಸ್ ಆರ್ ಟಿಸಿ ನಿಗಮದ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಬಸ್ಸಿನ ವ್ಯವಸ್ಥೆಗೆ ಕ್ರಮ ವಹಿಸಲಾಗಿದೆ. ಆರ್.ಟಿ.ಓ. ಆಧಿಕಾರಿಗಳು ಜಾತ್ರೆಗೆ ಬರುವ ಗೂಡ್ಸ್ ವಾಹನಗಳ ತಪಾಸಣೆ ನಡೆಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಈ ದೇಶದ ಕಾನೂನಿಗೆ ಪ್ರತಿಯೊಬ್ಬ ಪ್ರಜೆ ಕೂಡಾ ಗೌರವ ನೀಡಬೇಕು. ಜಾತ್ರಾ ಮಹೋತ್ಸವದಲ್ಲಿ ಸಾರ್ವಜನಿಕರ ಅನೂಕೂಲಕ್ಕಾಗಿ ನಗರದ ವಿವಿಧ ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಮಹಿಳಾ ಮತ್ತು ಮಕ್ಕಳ ಸುರಕ್ಷತೆಗಾಗಿ ನಗರದ ಎಲ್ಲ ಕಡೆಗಳಲ್ಲಿಯೂ ಸಹ ಸಿ.ಸಿ.ಟಿವಿ ಅಳವಡಿಸಲಾಗಿದೆ. ಕರ್ನಾಟಕ ಸುರಕ್ಷತಾ ಕಾಯ್ದೆ ಪ್ರಕಾರ 100 ಜನ ಒಟ್ಟಾಗಿ ಇರುವ ಹಾಗೂ 500 ಜನರು ಒಟ್ಟಿಗೆ ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿಯನ್ನು ಅಳವಡಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.

ದೂಡಾ ಅಧ್ಯಕ್ಷ ರಾಜನಳ್ಳಿ ಶಿವಕುಮಾರ ಮಾತನಾಡಿ, ಪ್ರಕ್ಷುಬ್ದ ವಾತಾವರಣ ಇರುವ ಸಂದರ್ಭದಲ್ಲಿಯೂ ನಮ್ಮ ನಗರ ಶಾಂತಿ ಮತ್ತು ಸೌರ್ಹದತೆಗೆ ಹೆಸರು ಪಡೆದಿದೆ. ನಗರದಲ್ಲಿ ಸುಮಾರು 15 ದಿನಗಳಿಂದ ವಿದ್ಯುತ್ ವ್ಯವಸ್ಥೆಯನ್ನು ಸರಿಪಡಿಸಲಾಗುತ್ತಿದೆ. ಅಧಿಕಾರಿಗಳು ಮತ್ತು ಸಾರ್ವಜನಿಕರು ಹೊಂದಾಣಿಕೆಯಿಂದ ಜಾತ್ರೆಯಲ್ಲಿ ಕೆಲಸ ಮಾಡಬೇಕು. ಕೋಣದ ಸಾರ ಹಾಕುವ ಸ್ಥಳಗಳಲ್ಲಿ ಹೆಚ್ಚಿನ ಪೊಲೀಸ್ ವ್ಯವಸ್ಥೆಯನ್ನು ಮಾಡಬೇಕು ಎಂದು ತಿಳಿಸಿದರು.

 

ಮೇಯರ್ ಬಿ.ಜಿ ಅಜಯ್ ಕುಮಾರ್ ಮಾತನಾಡಿ, ಪ್ರತಿ ಬಾರಿಯಂತೆ ಈ ಬಾರಿಯು ಜಾತ್ರೆಯು ಅದ್ದೂರಿ ಮತ್ತು ಶಾಂತಿಯುತವಾಗಿ ನಡೆಯಬೇಕು. ಜಾತ್ರೆಯಲ್ಲಿ ಕುಸ್ತಿ ಪಂದ್ಯಕ್ಕೆ ನೀಡುವ ಪ್ರಾಮುಖ್ಯತೆಯನ್ನು ಇತರೆ ಕ್ರೀಡೆಗಳಿಗೂ ನೀಡಬೇಕು. ಇದರಿಂದ ಎಲ್ಲಾ ಕ್ರೀಡೆಗಳಿಗೂ ಪ್ರೋತ್ಸಾಹ ದೊರೆಯುತ್ತದೆ. 2 ವರ್ಷಗಳಿಗೊಮ್ಮೆ ದೇವಿಯ ಜಾತ್ರೆಯ ನಡೆಯುತ್ತದೆ ಇದರಿಂದ ಜನತೆಗೆ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ. ಆದ್ದರಿಂದ ಜಾತ್ರೆಯನ್ನು 5 ವರ್ಷಗಳಿಗೊಮ್ಮೆ ನಡೆಸಿದರೆ ಸೂಕ್ತ ಎಂದು ತಿಳಿಸಿದರು.

ದುರ್ಗಾಂಬಿಕ ದೇವಸ್ಥಾನದ ಟ್ರಸ್ಟ್‍ನ ಧರ್ಮದರ್ಶಿಗಳಾದ ಚನ್ನಬಸಪ್ಪ ಮಾತನಾಡಿ, ರಾಜ್ಯದಲ್ಲಿಯೇ ನಗರದ ದುರ್ಗಾಂಬಿಕಾ ದೇವಿಯ ಜಾತ್ರೆಯು ಪ್ರಖ್ಯಾತಿಯನ್ನು ಪಡೆದಿದೆ. ಜಾತ್ರೆಗೆ ಎಲ್ಲಾ ರೀತಿಯ ಸಹಕಾರ ಮತ್ತು ಸೌಲಭ್ಯಗಳನ್ನು ಜಿಲ್ಲಾಡಳಿತ ನೀಡುತ್ತಿದೆ. ಈಗಾಗಲೇ 150 ನಲ್ಲಿಗಳನ್ನು ದೇವಸ್ಥಾನದ ಆವರಣದಲ್ಲಿ ಅಳವಡಿಸಲಾಗಿದೆ. ಮಹಾನಗರಪಾಲಿಕೆ ಮತ್ತು ಎಲ್ಲಾ ಇಲಾಖೆಯವರು ದೇವಿಯ ಜಾತ್ರಾ ಮಹೋತ್ಸವಕ್ಕೆ ಸಹಕಾರ ನೀಡುತ್ತಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ದೇವಿಯ ಜಾತ್ರೆಯು ಅದ್ದೂರಿಯಾಗಿ ನಡೆಯಲಿದೆ ಎಂದು ಹೇಳಿದರು.

ಮಹಾನಗರಪಾಲಿಕೆಯ ಸದಸ್ಯ ಎ. ನಾಗರಾಜ್ ಮಾತನಾಡಿ, ಸಭೆಯಲ್ಲಿ ಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ ಮುದಜ್ಜಿ, ನಗರ ವಿಭಾಗದ ಡಿವೈಎಸ್‍ಪಿ ನಾಗೇಶ್ ಐತಾಳ್, ಗ್ರಾಮಾಂತರ ವಿಭಾಗದ ಡಿವೈಎಸ್‍ಪಿ ಮಂಜುನಾಥ ಗಂಗಲ್, ಸಬ್‍ಇನ್ಸ್‍ಪೆಕ್ಟರ್ ಕೆ.ಎನ್.ಗಜೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಉಪ ನಿರ್ದೇಶಕ ವಿಜಯಕುಮಾರ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ದಾವಣಗೆರೆ ತಹಶೀಲ್ದಾರ್ ಸಂತೋಷ್ ಕುಮಾರ್, ಬೆಸ್ಕಾಂ, ಕೆಎಸ್‍ಆರ್‍ಟಿಸಿ, ಅಬಕಾರಿ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಬಿ.ಹೆಚ್.ವೀರಭದ್ರಪ್ಪ, ಜೆ.ಕೆ.ಕೊಟ್ರಬಸಪ್ಪ ಹಾಜರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *