Connect with us

Dvg Suddi-Kannada News

ರೈತರ ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ತೋರಿದ ಗ್ರಾಮಲೆಕ್ಕಾಧಿಕಾರಿ ಅಮಾನತ್ತು

ದಾವಣಗೆರೆ

ರೈತರ ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ತೋರಿದ ಗ್ರಾಮಲೆಕ್ಕಾಧಿಕಾರಿ ಅಮಾನತ್ತು

ಡಿವಿಜಿ ಸುದ್ದಿ, ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಬೆಳೆ ಸಮೀಕ್ಷೆಯಲ್ಲಿ ನಿರ್ಲಕ್ಷ್ಯ ತೋರಿದ  ಗ್ರಾಮ ಲೆಕ್ಕಾಧಿಕಾರಿ ಪ್ರಶಾಂತಕುಮಾರ್ ಎಂ.ಎಸ್ ಅವರನ್ನು  ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಅಮಾನತ್ತಿನಲ್ಲಿಟ್ಟಿದ್ದಾರೆ.

2019-20 ನೇ ಸಾಲಿನ ಮುಂಗಾರು ಹಂಗಾಮಿನ ಸಮೀಕ್ಷೆ ಕಾರ್ಯದಲ್ಲಿ ಕೂಗೂನಹಳ್ಳಿ ಗ್ರಾಮದ ಸರ್ವೇ ನಂ.42/1 ರಲ್ಲಿ ಚಂದ್ರಶೇಖರಪ್ಪ  ಹಾಗೂ ರತ್ನಮ್ಮ ಎಂಬುವರ ಬೆಳೆಯನ್ನು ತಪ್ಪಾಗಿ ನಮೂದಿಸಲಾಗಿದೆ ಎಂದು ರೈತರಿಂದ ಆಕ್ಷೇಪಣೆ ಸಲ್ಲಿಸಿದ್ದರು. ಸ್ಥಳ ಪರಿಶೀಲನೆ ನಡೆಸಿದಾಗ  ಮೆಕ್ಕೆಜೋಳ ಬೆಳೆಯ ಕಟಾವು ಕಾರ್ಯ ಮುಗಿದಿರುವುದು ಮತ್ತು ಅಲ್ಲಿ ಅಡಿಕೆ ಬೆಳೆ ಇರುವ ಬಗ್ಗೆ ಯಾವ ಕುರುಹುಗಳು ಕಂಡು ಬಂದಿರುವುದಿಲ್ಲ.

ಈ ಬಗ್ಗೆ ಈ ಗ್ರಾಮ ಲೆಕ್ಕಿಗರನ್ನು ದೂರವಾಣಿ ಮೂಲಕ ಸಂಪರ್ಕಿಸಲಾಗಿ ರೈತರ ಮನವಿಯಂತೆ ಬೆಳೆ ಬದಲಾಯಿಸಲಾಗಿದೆ ಎಂದು ತಿಳಿಸಿದ್ದು, ವಾಸ್ತವದಂತೆ ಕ್ರಮ ವಹಿಸಿಲ್ಲ. ಈ ನೌಕರ ಕರ್ತವ್ಯದಲ್ಲಿ ನಿರ್ಲಕ್ಷತೆ ತೋರಿದ್ದು,  ಬೆಳೆ ಸಮೀಕ್ಷೆಯಲ್ಲಿ ಅಸಡ್ಡೆತನ ತೋರಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅಮಾನತ್ತಿನಲ್ಲಿ ಇಟ್ಟಿದ್ದಾರೆ .

 

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top