ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲೆಯಲ್ಲಿ ನಾಳೆ (ಸೆ.13) 34 ಪರೀಕ್ಷಾ ಕೇಂದ್ರದಲ್ಲಿ ನಿಟ್ (ಯುಜಿ) ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ಅವಧಿಯಲ್ಲಿ 200 ಮೀ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸರ‍್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರವೇಶವೆಂದು ಘೋಷಿಸಿ ಆದೇಶಿಸಲಾಗಿದೆ.
ದಾವಣಗೆರೆ ತಾಲ್ಲೂಕಿನಲ್ಲಿ 24, ಹರಿಹರ 7, ಹೊನ್ನಾಳಿ 2, ಚನ್ನಗಿರಿ 1 ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗಳು ಸುಗಮವಾಗಿ ನಡೆಯಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ ಕೇಂದ್ರದ ಸುತ್ತಮುತ್ತಲಿರುವ ಜೆರಾಕ್ಸ್, ಸೈಬರ್ ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮಾಹಂತೇಶ ಬೀಳಗಿ ಆದೇಶಿಸಿದ್ದಾರೆ.



