Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಮತ್ತೊಬ್ಬ ಯುವಕನಿಗೆ ಕೊರೊನಾ ಸೊಂಕು

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ಮತ್ತೊಬ್ಬ ಯುವಕನಿಗೆ ಕೊರೊನಾ ಸೊಂಕು

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿ ಮತ್ತೊಬ್ಬ ಯುವಕನಿಗೆ ಕೊರೊನಾ ಸೊಂಕು ಇರುವುದು ದೃಢಪಟ್ಟಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಧಿಕೃತವಾಗಿ ಮಾಹಿತಿ ನೀಡಿದೆ.

20 ವರ್ಷದ ಯುವಕನಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಯುವಕ ಈಗಾಗಲೇ ಸೊಂಕಿತರಾಗಿ ಆಸ್ಪತ್ರೆಯಲ್ಲಿರುವ ಚಿತ್ರದುರ್ಗದ ಮಹಿಳೆ ಜೊತೆ ನೇರ ಸಂಪರ್ಕ ಹೊಂದಿದ್ದರಿಂದ ಸೊಂಕು ತಗುಲಿದೆ. ಸೊಂಕಿತ ಯುವಕನನ್ನು ಐಸೋಲೇಟೆಡ್ ವಾರ್ಡ್‌ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಯುವಕ ಗಯಾನದಿಂದ ಬಂದಿದ್ದು, ಹೋಮ್ ಕ್ವಾರಂಟೈನ್ ನಲ್ಲಿದ್ದ, ಯುವಕನಿಗೆ ಕೊರೊನಾ ಲಕ್ಷಣ ಬಂದ ಹಿನ್ನೆಲೆ ಚಿಕಿತ್ಸೆ ಒಳಪಡಿಸಿದಾಗ ಸೊಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 3 ಏರಿಕೆಯಾಗಿದ್ದು , ರಾಜ್ಯದಲ್ಲಿ ಸೊಂಕಿತರ ಸಂಖ್ಯೆ 82ಕ್ಕೆ ಹೆಚ್ಚಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top