ಡಿವಿಜಿ ಸುದ್ದಿ, ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2019-20ನೇ ಸಾಲಿನಲ್ಲಿ ಪೂರ್ಣಾವಧಿ ಪಿಎಚ್‍ಡಿ ಅಧ್ಯಯನದಲ್ಲಿ ತೊಡಗಿಕೊಂಡಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವ್ಯಾಸಂಗ ವೇತನ (ಫಿಲೋಶಿಪ್)ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳಾದ ಪ್ರವರ್ಗ1, 2(ಎ), 3(ಎ) ಮತ್ತು 3(ಬಿ) ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ರೂ.10000 ದಂತೆ ವ್ಯಾಸಂಗ ವೇತನ (ಫಿಲೋಶಿಪ್) ನೀಡಲಾಗುವುದು. ಈ ಹಿಂದೆ ಮಾಸಿಕ ವ್ಯಾಸಂಗ ವೇತನಕ್ಕೆ ಆಯ್ಕೆಯಾಗಿದ್ದು, ಪ್ರಸ್ತುತ ಸಾಲಿನಲ್ಲಿ ಮುಂದುವರಿಯುತ್ತಿರುವ ಅರ್ಹ ನವೀಕರಣ ವಿದ್ಯಾರ್ಥಿಗಳು ಹಾಗೂ 2019-20 ನೇ ಸಾಲಿನಲ್ಲಿ ಪ್ರಥಮ ವರ್ಷದಲ್ಲಿ ಅಭ್ಯಸಿಸುತ್ತಿರುವ ಹೊಸ ವಿದ್ಯಾರ್ಥಿಗಳು ವೆಬ್ ಸೈಟ್ ಮೂಲಕ www.backwardclasseskar.nic.in ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.12 ಕೊನೆಯದಿನವಾಗಿರುತ್ತದೆ.ಹೆಚ್ಚಿನ ವಿವರಗಳಿಗೆ 8050770004 ಗೆ ಸಂಪರ್ಕಿಸಿ.