ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಬಸವೇಶ್ವರ ಫೀಡರ್‍ನಲ್ಲಿ ಜಲಸಿರಿ ಕಾಮಗಾರಿ ಅಡಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ನಾಳೆ (ಜೂನ್ 10) ರಂದು ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಬಸವೇಶ್ವರ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಸ್.ಎಸ್. ಬಡಾವಣೆ, ಎ ಬ್ಲಾಕ್, ಅಥಣಿ ಕಾಲೇಜ್ ರಸ್ತೆ, ಅಂಗವಿಕಲರ ಶಾಲೆ ಹಾಗು ಸುತ್ತಮುತ್ತ ಪ್ರದೇಶಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ



