ಡಿವಿಜಿ ಸುದ್ದಿ, ದಾವಣಗೆರೆ: ಮೌನೇಶ್ವರ, ಜಯನಗರ ಫೀಡರ್ ಮತ್ತು ಇ.ಎಸ್.ಐ ಫೀಡರ್ಗಳಲ್ಲಿ ಮಹಾನಗರಪಾಲಿಕೆ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ನಾಳೆ ವಿವಿಧ ಕಡೆ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯವುಂಟಾಗಲಿದೆ. ಆ ಕಾರಣ ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸಬೇಕಾಗಿ ಕೋರಲಾಗಿದೆ.
ಮೌನೇಶ್ವರ ಫೀಡರ್ನ- ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸ ಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.
ಜಯನಗರ ಫೀಡರ್ನ- ಜಯನಗರ, ದುರ್ಗಾಂಬಿಕಾ ದೇವಸ್ಥಾನ ಸುತ್ತಮುತ್ತ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಇ.ಎಸ್.ಐ ಫೀಡರ್ನ ಹಾಗೂ ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಮಧ್ಯಾಹ್ನ 01 ಗಂಟೆಯಿಂದ ಸಂಜೆ 05 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



