ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಪೌರ ಕಾರ್ಮಿಕರಿಗೆ ಮತ್ತು ನೇರ ಪಾವತಿ ಪೌರಕಾರ್ಮಿಕರಿಗೆ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ ಎಲ್.ಎಮ್. ಹನುಮಂತಪ್ಪ ಆಹಾರ ಕಿಟ್ ವಿತರಿಸಿದರು.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್ ಗಳಾದ ಪೌರ ಕಾರ್ಮಿಕರಿಗೆ ಸಂಘದ ವತಿಯಿಂದ ಅಗತ್ಯವಿರುವ ಆಹಾರ ಸಾಮಾಗ್ರಿಗಳ ಕಿಟ್ ಗಳನ್ನು ಪಾಲಿಕೆ ಪೌರ ಕಾರ್ಮಿಕರ ಕಚೇರಿಯಲ್ಲಿ ವಿತರಿಸಲಾಯಿತು.

ಇದಕ್ಕೂ ಮುನ್ನ ಬಾಪೂಜಿ ವಿದ್ಯಾ ಸಂಸ್ಥೆಯ ನಿರ್ದೇಶಕಿ ಪ್ರಭಾ ಮಲ್ಲಿಕಾರ್ಜುನ್ ಸಾಂಕೇತಿಕವಾಗಿ ಆಹಾರ ಕಿಟ್ ವಿತರಣೆಗೆ ಚಾಲನೆ ನೀಡಿದರು. ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಜನಕ್ಕೆ ಸಹಾಯ ಮಾಡಲು ಸ್ಥಿತಿವಂತರು ಮುಂದೆ ಬರಬೇಕು ಎಂದು ಪ್ರಭಾ ಮಲ್ಲಿಕಾರ್ಜುನ್ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆರೋಗ್ಯ ಇಲಾಖೆಯ ಆರೋಗ್ಯ ಪರಿವೀಕ್ಷಕ ಡಾಕ್ಟರ್ ಸಂತೋಷ್ ಕುಮಾರ್ , ಸುನೀಲ್ ಕುಮಾರ್ ಹಾಗೂ ಮಹಾನಗರ ಪಾಲಿಕೆ ಸದಸ್ಯ ಸುರೇಶ್ ಕುಮಾರ್ , ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸಾಗರ್.ಎಲ್.ಹೆಚ್ ಉಪಸ್ಥಿತರಿದ್ದರು.



