Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ದಾವಣಗೆರೆ

ದಾವಣಗೆರೆ: ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ಡಿವಿಜಿ ಸುದ್ದಿ, ದಾವಣಗೆರೆ:  ಜೂ. 18 ರಂದು ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಯಲಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲಾ 31 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪರೀಕ್ಷಾ ಅವಧಿಯಲ್ಲಿ 200 ಮೀ. ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಮತ್ತು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್, ಸೈಬರ್ ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಘೋಷಿಸಿ ಆದೇಶಿಸಲಾಗಿದೆ.

ಪರೀಕ್ಷೆ ಸುಗಮವಾಗಿ ನಡೆಯಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ ಹಾಗೂ ಪರೀಕ್ಷೆಗಳು ವ್ಯವಸ್ಥಿತವಾಗಿ ಮತ್ತು ದೋಷರಹಿತವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧ ಹೇರಲಾಗಿದೆ.

ಈ ಆದೇಶವು ಪರಿಕ್ಷಾರ್ಥಿಗಳಿಗೆ ಹಾಗೂ ಸದರಿ ಪರೀಕ್ಷೆಯ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ. ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲು ಮತ್ತು ಸದರಿ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆ ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಮುಚ್ಚಿಸಲು ಜಿಲ್ಲಾ ಪೊಲೀಸ್ ಅಧಿಕ್ಷಕರು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top