ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಕ್ರಮ : ಜಿಲ್ಲಾಧಿಕಾರಿ  

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ಮಾ.04 ರಿಂದ 23 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಯಾವುದೇ  ಅಕ್ರಮ ನಡೆಯದಂತೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ಒಟ್ಟು 31 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ದಾವಣಗೆರೆ ತಾಲ್ಲೂಕಿನಲ್ಲಿ 17 ಕೇಂದ್ರಗಳು, ಹರಿಹರ 04, ಜಗಳೂರು 03, ಚನ್ನಗಿರಿ 04, ಹೊನ್ನಾಳಿ 03 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಯಲ್ಲಿ  ಯಾವುದೇ ರೀತಿಯ ಅಕ್ರಮಕ್ಕೆ ಎಡೆ ಮಾಡಿಕೊಡದಂತೆ ಶಾಂತಿಯುತವಾಗಿ  ದ್ವೀತಿಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು ಸಂಖ್ಯೆ 19539 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಹೊಸ ವಿದ್ಯಾರ್ಥಿಗಳು 16373. ಪುನರಾವರ್ತಿತ ವಿದ್ಯಾರ್ಥಿಗಳ ಸಂಖ್ಯೆ 2663. ಖಾಸಗಿ ವಿದ್ಯಾರ್ಥಿಗಳ ಸಂಖ್ಯೆ 503. ಕಲಾ ವಿಭಾಗದಲ್ಲಿ 5423 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 5570 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 8546 ವಿದ್ಯಾರ್ಥಿಗಳು.  9067  ವಿದ್ಯಾರ್ಥಿಗಳು, 10472  ವಿದ್ಯಾರ್ಥಿನಿಯರು ಪರೀಕ್ಷೆ ಬರಯಲಿದ್ದಾರೆ.

ಕೇಂದ್ರಗಳಿಗೆ ಪರೀಕ್ಷೆ ಮುಗಿಯುವವರೆಗೂ ಪ್ರತಿ ದಿನ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್‍ನ್ನು ಜಾರಿ ಮಾಡಲಾಗವುದು. ಹಾಗೂ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲಾಗುವುದು. ಪರೀಕ್ಷಾ ದಿನದಂದು ಸಂಬಂಧಿಸಿದ ಖಜಾನೆಗಳಿಂದ ಪ್ರಶ್ನೆ ಪತ್ರಿಕೆ ಸ್ವೀಕೃತಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ವಿತರಣೆ ಕುರಿತು ಖಜಾನಾಧಿಕಾರಿಗಳು, ತಹಶೀಲ್ದಾರರು,  ಕ್ಷೇತ್ರ ಶಿಕ್ಷಣಧಿಕಾರಿಗಳು ಹಾಗೂ ಸಂಬಂಧಿಸಿದ ವಿಶೇಷ ಪ್ರಶ್ನೆ ಪತ್ರಿಕೆ ಪಾಲಕರು ಸಮಯಪಾಲನೆ ಮಾಡಿ ಸಹಕರಿಸಬೇಕು. ಹಾಗೂ ವಿಶೇಷ ಪ್ರಶ್ನೆ ಪತ್ರಿಕೆ ಪಾಲಕರಿಗೆ ಪ್ರತಿ ದಿನ ಪೊಲೀಸ್ ಬೆಂಗಾವಲು ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.
ಈಗಾಗಲೇ ಅನೇಕ ಕಾಲೇಜುಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಈ ವ್ಯವಸ್ಥೆ ಇಲ್ಲದ ಕಡೆ  ಸಿಸಿ ಕ್ಯಾಮೆರಾ ಅಳವಡಿಸಬೇಕು. ಎಲ್ಲ ಕೇಂದ್ರಗಳಲ್ಲಿ ಸೂಕ್ತ ಪೀಠೋಪಕರಣ, ಆಸನಗಳು ಸೇರಿದಂತೆ ಮೂಲಭೂತ ವ್ಯವಸ್ಥೆ ಸಮರ್ಪಕವಾಗಿರುವಂತೆ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಿರಂಜನ್ ಮಾತನಾಡಿ,  ಪರೀಕ್ಷಾ ಕೇಂದ್ರಗಳಿಗೆ ವಿತರಿಸುವ ವಾಹನಗಳಿಗೆ ಜಿ.ಪಿ.ಎಸ್ ಸಿಸ್ಟಮ್‍ಗಳನ್ನು ಅಳವಡಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗುವುದು. ಪರೀಕ್ಷೆಗಳು ನಡೆಯುವ ಪರೀಕ್ಷಾ ಕೆಂದ್ರದ ಕೊಠಡಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕರು, ಸಿಬ್ಬಂದಿಗಳು, ಹಾಗೂ ವಿದ್ಯಾರ್ಥಿಗಳು ಮೊಬೈಲ್ ಫೋನ್ ಸೇರಿದಂತೆ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು ಕಡ್ಡಾಯವಾಗಿ ತರುವಂತಿಲ್ಲ. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಬೇಕು ಎಂದರು.

ಪರೀಕ್ಷೆಯಲ್ಲಿ ಹೆಚ್ಚುವರಿ ಪೇಪರ್ ತೆಗೆದುಕೊಳ್ಳುವಲ್ಲಿ ಆಗುತ್ತಿದ್ದ ಅನಾನುಕೂಲತೆಯನ್ನು ಗಮನಿಸಿ ಇದೇ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತರ ಬರೆಯಲು 40 ಪುಟಗಳುಳ್ಳ ಬುಕ್‍ಲೆಟ್‍ನ್ನು ನೀಡಲಾಗುತ್ತಿದೆ. ಇದರಲ್ಲಿ ಮೊದಲ ಮತ್ತು ಕೊನೆಯ ಕವರಿಂಗ್ ಪುಟ ಬಿಟ್ಟು 38 ಪುಟಗಳಲ್ಲಿ ಉತ್ತರಿಸಬಹುದು. ಹಾಗೂ ಹೆಚ್ಚುವರಿ ಪೇಪರ್ ಬೇಕಾದರೆ ಮತ್ತೊಂದು ಹೊಸ ಬುಕ್‍ಲೆಟ್‍ನ್ನು ನೀಡಲಾಗುವುದು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ.ಜಿ,  ದಾವಣಗೆರೆಯ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ದಾವಣಗೆರೆ ಉತ್ತರ ವಲಯ, ದಕ್ಷಿಣ ವಲಯ, ಹರಿಹರ, ಹೊನ್ನಾಳಿ, ಜಗಳೂರು, ಚನ್ನಗಿರಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಶೇಷ ಪ್ರಶ್ನೆ ಪತ್ರಿಕಾ ಪಾಲಕರಾಗಿ ನೇಮಿಸಲಾದ ಎಲ್ಲಾ ಅಧಿಕಾರಿಗಳು,ಪ್ರಾಚಾರ್ಯರುಗಳು ಉಪಸ್ಥಿತರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *