ಡಿವಿಜಿ ಸುದ್ದಿ, ದಾವಣಗೆರೆ : ದಾವಣಗೆರೆ ರೈಲು ನಿಲ್ದಾಣದಲ್ಲಿ ಎರಡನೇ ಪ್ರವೇಶ ದ್ವಾರದ ಉದ್ಘಾಟನೆ ಸಮಾರಂಭವನ್ನು ನಾಳೆ (ಫೆ.21) ಬೆಳಿಗ್ಗೆ 11 ಗಂಟೆಗೆ ನಗರದ ರೈಲು ನಿಲ್ದಾಣದಲ್ಲಿರುವ ಎರಡನೇ ಪ್ರವೇಶ ದ್ವಾರದಲ್ಲಿ ಆಯೋಜಿಸಿದೆ.
ನೈರುತ್ಯ ರೈಲ್ವೆ ವತಿಯಿಂದ ಆಯೋಜಿಸಲಾಗಿರುವ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವರು ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್ ಈಶ್ವರಪ್ಪ ಮತ್ತು ದಾವಣಗೆರೆ ಲೋಕಸಭಾ ಸದಸ್ಯ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ನೆರವೇರಲಿದೆ. ಅಧ್ಯಕ್ಷತೆಯನ್ನು ದಾವಣಗೆರೆ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ ರವೀಂದ್ರನಾಥ್ ಮತ್ತು ಶಾಮನೂರು ಶಿವಶಂಕರಪ್ಪ ಇವರು ವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಜಿ.ಪಂ ಅಧ್ಯಕ್ಷೆ ಯಶೋಧಮ್ಮ ಮರುಳಪ್ಪ, ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ, ಆರ್ ಚೌಡರೆಡ್ಡಿ, ಜಿ. ರಘು ಆಚಾರ್, ಕೆ. ಅಬ್ದುಲ್ ಜಬ್ಬಾರ್ ಹಾಗೂ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್ ಶಿವಕುಮಾರ್ ಭಾಗಿಯಾಗಲಿದ್ದಾರೆ.