ರಾಜೀವ್‌ಗಾಂಧಿ ಅವರದ್ದು ಸಂಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿತ್ವ ; ಪ್ರಧಾನಿ ನರೇಂದ್ರ ಮೋದಿ ಅವರದ್ದು ದ್ವೇಷ ರಾಜಕಾರಣದ ವ್ಯಕ್ತಿತ್ವ : ಡಿ. ಬಸವರಾಜ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ರಾಜೀವ್‌ಗಾಂಧಿ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭದಲ್ಲಿ ವಿರೋಧಪಕ್ಷದ ನಾಯಕರಾದ ಅಜಾತ ಶತ್ರು ಅಟಲ್‌ಬಿಹಾರಿ ವಾಜಪೇಯಿ ಅವರನ್ನು ಆರೋಗ್ಯ ಚಿಕಿತ್ಸೆಗಾಗಿ ವಿದೇಶಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಗೌರವಿಸಿದ್ದರು.  ಆದರೆ, ಪ್ರಧಾನಿ ನರೇಂದ್ರ ಮೋದಿಯವರು ದ್ವೇಷದ ರಾಜಕಾರಣ ಮೂಲಕ ಗಾಂಧಿ ಕುಟುಂಬಕ್ಕೆ ನೀಡಲಾಗಿದ್ದ ಎಸ್‌ಪಿಜಿ ಭದ್ರತೆ ವಾಪಸ್ಸು ಪಡೆದರು. ರಾಜೀವ್‌ಗಾಂಧಿ ಅವರದ್ದು ಸಂಕಷ್ಟಕ್ಕೆ ಸ್ಪಂದಿಸುವ ವ್ಯಕ್ತಿತ್ವ,  ಪ್ರಧಾನಿ ನರೇಂದ್ರ ಮೋದಿ ಅವರದ್ದು ದ್ವೇಷ ರಾಜಕಾರಣ ವ್ಯಕ್ತಿತ್ವ. ಇದೇ ರಾಜೀವ್ ಗಾಂಧಿ ಮತ್ತು ಪ್ರಧಾನಿ ಮೋದಿ ಅವರ ನಡುವೆ ಇರುವ ವ್ಯತ್ಯಾಸ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಅಭಿಪ್ರಾಯಪಟ್ಟರು.

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂಟಾಕ್ ವಿಭಾಗವು ದಾವಣಗೆರೆ ನಗರದಲ್ಲಿ ಏರ್ಪಡಿಸಿದ್ದ ಭಾರತ ರತ್ನ ರಾಜೀವ್‌ಗಾಂಧಿಯವರ 29ನೇ ಪುಣ್ಯ ತಿಥಿ ಕಾರ್ಯಕ್ರಮದಲ್ಲಿ ರಾಜೀವ್‌ಗಾಂಧಿ ಅವರ  ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಭಾರತ ದೇಶದ ಏಕತೆ ಮತ್ತು ಸಮಗ್ರತೆಗಾಗಿ ತ್ಯಾಗ ಬಲಿದಾನ ಮಾಡಿದ ರಾಜೀವ್‌ಗಾಂಧಿಯವರ ಪುಣ್ಯ ತಿಥಿಯನ್ನು ದೇಶಾದ್ಯಂತ ಭಯೋತ್ಪಾದನಾ ವಿರೋಧಿ ದಿನವಾಗಿ ಆಚರಿಸಲಾಗುತ್ತಿದೆ ಎಂದು  ತಿಳಿಸಿದರು.

ಮಾಹಿತಿ ತಂತ್ರಜ್ಞಾನ ಮತ್ತು ದೂರಸಂಪರ್ಕದಲ್ಲಿ ಕ್ರಾಂತಿ ಮಾಡಿದ ರಾಜೀವ್‌ಗಾಂಧಿ ಅವರು, ಶ್ರೀ ಸಾಮಾನ್ಯ ಕೈಯಲ್ಲಿ ಮೊಬೈಲ್ ಬರಲು ಕಾರಣಿಕರ್ತರು. ನವಭಾರತದ ನಿರ್ಮಾಣದ ಕನಸುಗಾರನಾಗಿ 21 ನೇ ಶತಮಾನಕ್ಕೆ ಸಜ್ಜುಗೊಳಿಸಿದರು. 18 ವರ್ಷಕ್ಕೆ ಮತದಾನ ಹಕ್ಕು, ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದು ಜನಪರ ಕಾರ್ಯಗಳ ರೂವಾರಿಯಾಗಿದ್ದರು ಎಂದರು.

rajeeva gandhi 2

ರಾಜೀವ್‌ಗಾಂಧಿಯವರು ಭಾರತ ದೇಶದ ಇತಿಹಾಸದಲ್ಲೇ ಅತೀ ಕಿರಿಯ ವಯಸ್ಸಿಗೆ ಅಂದರೆ ಕೇವಲ 40 ವರ್ಷಕ್ಕೆ ಪ್ರಧಾನಿಯಾಗಿದ್ದರು.  ನವಭಾರತದ ನಿರ್ಮಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದರು.  ಪ್ರಮುಖವಾಗಿ ವಿಜ್ಞಾನ, ಮಾಹಿತಿ ತಂತ್ರಜ್ಞಾನ ಮತ್ತು ದೂರಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಯನ್ನೇ ಮಾಡಿದರು. ಅದರ ಫಲವಾಗಿ ದೇಶಾದ್ಯಂತ ಇಂದು ಐಟಿ ಬಿಟಿ ಪ್ರಾಮುಖ್ಯತೆ ಪಡೆದಿದೆ. ಜೊತೆಗೆ ಇಂದಿರಾಗಾಂಧಿ ಮುಕ್ತ ವಿಶ್ವವಿದ್ಯಾನಿಲಯಗಳನ್ನು ದೇಶಾದ್ಯಂತ ಸ್ಥಾಪಿಸಿ ಶಿಕ್ಷಣಕ್ಕೆ ಒತ್ತು ನೀಡಿದರು.

ರಾಜೀವ್‌ಗಾಂಧಿಯವರ ನಾಯಕತ್ವದಲ್ಲಿ 1984 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಸರ್ವಕಾಲಿಕ ದಾಖಲೆಯಾದ  404 ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲುವಂತೆ ನಾಯಕತ್ವದಲ್ಲಿ ಗೆದ್ದಿತ್ತು. ಸಂವಿಧಾನದ 73 ಮತ್ತು 74 ನೇ ಕಾಯ್ದೆಗೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಿಗೆ ಪರಮಾಧಿಕಾರ ದೊರೆಯುವಂತೆ ಶ್ರಮಿಸಿದರು. ರಾಜೀವ್‌ಗಾಂಧಿಯವರ ಸಾಧನೆ ತ್ಯಾಗ, ಬಲಿದಾನ, ನಮಗೆ ಸ್ಪೂರ್ತಿಯಾಗಿದೆ. ಅವರ ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಡಿ. ಬಸವರಾಜ್ ತಿಳಿಸಿದರು.

ಈ ಸಮಾರಂಭದಲ್ಲಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಇಂಟಾಕ್ ಅಧ್ಯಕ್ಷ   ಕೆ.ಎಂ. ಮಂಜುನಾಥ್, ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಪ್ರವೀಣ್ ಕುಮಾರ್, ಎನ್‌ಎಸ್‌ಯುಐ ನಗರಾಧ್ಯಕ್ಷ ಟಿ.ವಿ. ಗಿರೀಧರ್, ಜಿಲ್ಲಾ ಕಾಂಗ್ರೆಸ್ ಮುಖಂಡ ಬಾಡದರವಿ, ಕೆ. ರೇವಣಸಿದ್ದಪ್ಪ, ಬಿ.ಹೆಚ್. ಉದಯ್‌ಕುಮಾರ್, ಡಿ. ಶಿವಕುಮಾರ್, ವಿ. ಶ್ರೀನಿವಾಸ್, ಹಸನ್ ಅಲಿ,  ಜಿ.ಹೆಚ್. ನಾಗರಾಜ್, ಬಿ. ಮಂಜುನಾಥ್ ಇತರರು ಹಾಜರಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *