ಡಿವಿಜಿ ಸುದ್ದಿ, ದಾವಣಗೆರೆ: ವೀರಶೈವ ಲಿಂಗಾಯತ ಸಮುದಾಯದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಬಸವ ಸೇನೆ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡುದ ರಾಷ್ಟ್ರೀಯ ಬಸವ ಸೇನೆಯ ರಾಜ್ಯಾಧ್ಯಕ್ಷ ಶಿವನಗೌಡ ಪಾಟೀಲ್, ಒಂದುವರೆ ಕೋಟಿ ಜನ ಸಂಖ್ಯೆ ಹೊಂದಿರುವ ಲಿಂಗಾಯದ ಸಮುದಾಯದಲ್ಲಿ 80 ಕ್ಕೂ ಹೆಚ್ಚು ಉಪ ಜಾತಿಗಳಿವೆ. ಲಿಂಗಾಯತ ಸಮುದಾಯದಲ್ಲಿಯೂ ಅರ್ಥಿಕವಾಗಿ ಹಿಂದುಳಿದವರಿದ್ದು, ಅವರಿಗೆ ಸಾಮಾಜಿಕ ನ್ಯಾಯ ಒದಗಿಸುವ ದೃಷ್ಠಿಯಿಂದ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂದರು.
ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ನಿಗಮ ಮಾಡಬೇಕು ಎಂಬ ಬೇಡಿಕೆ ಬಹಳ ವರ್ಷಗಳಿಂದಿದ್ದು, ನಮ್ಮ ಸಮುದಾಯದ ನಾಯಕರೇ ಶಾಕರು, ಮಂತ್ರಿಗಳಾಗಿದ್ದರೂ ನಿಗಮ ಸ್ಥಾಪನೆಯಾಗಿಲ್ಲ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ, ದಕ್ಷಿಣ ಕರ್ನಾಟಕದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಲಿಂಗಾಯತರು ಇದ್ದರೂ, ಅರ್ಥಿಕವಾಗಿ ಹಿಂದುಳಿದ್ದಾರೆ. ಈ ಬಗ್ಗೆ ಅನೇಕ ಮಠಧೀಶರು ಮನವಿ ಸಹಾ ನಿಗಮ ಸ್ಥಾಪಿಸುವಂತೆ ಮಾಡಿದ್ಧಾರೆ. ಹೀಗಾಗಿ ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಕಾಂತ ನಿಲಗುಂದ, ಮಂಜುಳಾ ಮಹೇಶ್, ಅಭಿಷೇಕ ಪಿ.ಎಳಹೊಳೆ, ಟಿಂಕರ್ ಮಂಜಣ್ಣ, ಬಸವರಾಜ್ ಎಂ.ಭಾವಿ, ನಿತೀಶ್ ನಾಗುರ್, ನಾಗರಾಜ್ ಬೆಳವನೂರ್



