ಡಿವಿಜಿ ಸುದ್ದಿ, ದಾವಣಗೆರೆ: ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ವಿರುದ್ಧ ಕಾಂಗ್ರೆಸ್ ಮುಖಂಡ ಸುಭಾಶ್ ಚಂದ್ರ ಅವರು ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೊರೊನಾ ವೈರಸ್ ಚಿಕಿತ್ಸೆಗೆ ಸ್ಪಂದಿಸದ ತಬ್ಲೀಗಿಗಳನ್ನು ಗುಂಡಿಕ್ಕಿ ಕೊಂದರೂ ತಪ್ಪಲ್ಲ ಎಂದು ರೇಣುಕಾರ್ಯ ಅವರು ಹೇಳಿಕೆ ನೀಡಿದ್ದಾರೆ. ಶಾಂತಿ ಕದಡುವಂತಹ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸುದ್ದಿಗಾಗಿ ವಾಟ್ಸಾಪ್ : 7483892205
ಇಮೇಲ್: dvgsuddi@gmail.com



