Connect with us

Dvg Suddi-Kannada News

ಗಣರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆ

ದಾವಣಗೆರೆ

ಗಣರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆ

ಡಿವಿಜಿ ಸುದ್ದಿ, ದಾವಣಗೆರೆ:71 ನೇ ಗಣರಾಜ್ಯೋತ್ಸವ ಪೂರ್ವಸಿದ್ದತೆ ಸಭೆಯು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಸಭೆಯ ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು , ರಾಷ್ಟ್ರ ಹಬ್ಬವಾದ ಗಣರಾಜ್ಯೋತ್ಸವ ಅರ್ಥ ಪೂರ್ಣವಾಗಿ ಆಚರಿಸಬೇಕಿದೆ.  ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ನೆನೆಯುವ ದಿನ ಇದಾಗಬೇಕು.  ಅವರ ಶ್ರಮ ತ್ಯಾಗ, ಬಲಿದಾನಗಳಿಗೆ ನಾವು ಗೌರವ ಸಮರ್ಪಿಸಬೇಕಿದೆ ಎಂದರು.

ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಲಿದೆ. ಎಲ್ಲಾ ಇಲಾಖಾ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರೆವೇರಿಸಿ ಬೆಳಿಗ್ಗೆ 09 ಗಂಟೆಯೊಳಗಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಅಂದು ಯಾವುದೇ ಕಾರಣಕ್ಕೂ ಸರ್ಕಾರಿ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳು ರಜೆ ಎಂದು ಭಾವಿಸದೇ ತಪ್ಪದೇ ಹಾಜರಿರಬೇಕು. ಹಾಜರಾಗದೇ ಇರುವವರಿಗೆ ನೋಟಿಸ್ ನೀಡಲಾಗುವುದು.

10 ಸಾವಿರ ಜನರು ಕುಳಿತುಕೊಳ್ಳಲು ಸಾಮಥ್ರ್ಯವಿರುವ ಕ್ರೀಡಾಂಗಣ ಅಂದು ತುಂಬಬೇಕು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆ ನೋಡಿಕೊಳ್ಳಬೇಕು ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಮಕ್ಕಳಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಸಾಂಸ್ಕಂತಿಕ ಕಾರ್ಯಕ್ರಮ ನೀಡುವ ಮತ್ತು ಪೆರೇಡ್‍ನಲ್ಲಿ ಭಾಗವಹಿಸುವ ಮಕ್ಕಳಿಗೆ ಅಗತ್ಯ ಸೌಲಭ್ಯಗಳನ್ನು ಸಂಬಂಧಿಸಿದ ಇಲಾಖೆಗಳು ಒದಗಿಸಬೇಕು ಎಂದು ಸೂಚಿಸಿದರು.

ಪ್ಲಾಸ್ಟಿಕ್ ಧ್ವಜ ನಿಷೇಧ

ಪಾಸ್ಟಿಕ್ ಧ್ವಜ, ಹೂಗುಚ್ಚ, ಪ್ಲಾಸ್ಟಿಕ್ ನೀರಿನ ಬಾಟಲ್‍ಗಳನ್ನು ಯಾವುದೇ ಕಾರಣಕ್ಕೂ ತರುವಂತಿಲ್ಲ. ಇಡೀ ಕಾರ್ಯಕ್ರಮದ ಮೇಲುಸ್ತುವಾರಿಯನ್ನು ಅಪರ ಜಿಲ್ಲಾಧಿಕಾರಿ, ಉಪ ವಿಭಾಗಧಿಕಾರಿ, ತಹಶೀಲ್ದಾರರು, ಪೊಲೀಸ್ ಉಪ ಅಧೀಕ್ಷಕರು, ಮಹಾನಗರಪಾಲಿಕೆ ಆಯುಕ್ತರು  ನೋಡಿಕೊಂಡು ಕಾರ್ಯಕ್ರಮ ಅರ್ಥಪೂರ್ಣಗೊಳಿಸಲು ಸಹಕರಿಸಬೇಕು. ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಧ್ವಜ ಸಂಹಿತಿಯನ್ನು ಕಾಪಾಡಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯವರು ಎಲ್ಲಾ ಶಾಲೆಗಳಲ್ಲಿ 7.30 ಕ್ಕೆ ಧ್ವಜಾರೋಹಣ ನೆರವೇರಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಮಾತನಾಡಿ, ಪ್ರತೀ ವರ್ಷದಂತೆ ಈ ವರ್ಷವೂ ಕಾರ್ಯಕ್ರಮವನ್ನು ನಿಗದಿಪಡಿಸಿದ ಇಲಾಖೆಯವರು ತಮಗೆ ವಹಿಸಿರುವ ಜವಾಬ್ದಾರಿಯನ್ನು ನಿರ್ವಹಿಸಬೇಕು. ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ಪ್ರಮುಖ ಖಾಸಗಿ ಕಚೇರಿಗಳ ಮೇಲೆ ಜ.25 ಮತ್ತು 26 ರಂದು ವಿದ್ಯುತ್ ದೀಪಾಲಂಕಾರ ಮಾಡಿಸಬೇಕು ಎಂದರು.

ಕ್ರೀಡಾಂಗಣದಲ್ಲಿ ಮತ್ತು ಸಾಂಸ್ಕಂತಿಕ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪೊಲೀಸ್ ಇಲಾಖೆಯವರು ಭದ್ರತೆ ಮತ್ತು ಸುರಕ್ಷತೆಯನ್ನು ಒದಗಿಸಬೇಕು. ಕ್ರೀಡಾಂಗಣದಿಂದ ಕೆಲವು ಶಾಲೆಗಳು ದೂರವಿದ್ದು, ಆರ್‍ಟಿಓ ಇಲಾಖೆಯವರು ಶಾಲಾ ಮಕ್ಕಳಿಗೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿ/ನೌಕರರಿಗೆ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕೆಂದ ಅವರು ಎಲ್ಲ ಇಲಾಖೆಗಳ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಶಿಸ್ತಿನಿಂದ ನಿರ್ವಹಿಸುವ ಮೂಲಕ ಗಣರಾಜ್ಯೋತ್ಸವವನ್ನು ಯಶಸ್ವಿಗೊಳಿಸಬೇಕೆಂದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ.ಜಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top