ಡಿವಿಜಿ ಸುದ್ದಿ, ದಾವಣಗೆರೆ: ಸೈನ್ಸ್ ಅಕಾಡೆಮಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ದಶಮಾನೋತ್ಸವ ಜ.11 ರಂದು ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರ್ಯದರ್ಶಿ ವೈ.ವಿ ವಿನಯ್, ಆವರಗೊಳ್ಳ ಪುರವರ್ಗ ಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದು, ಸೈನ್ಸ್ ಅಕಾಡೆಮಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ. ವಿರೂಪಾಕ್ಷಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಸದ ಜಿ. ಎಂ. ಸಿದ್ದೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಶಾಸಕ ಶಾಮನೂರು ಶಿವಶಂಕರಪ್ಪ, ಎಸ್.ಎ . ರವೀಂದ್ರನಾಥ್, ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಿ.ಸಿ. ನಿರಂಜನ್ ಕುಮಾರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಅದಿತಿ ಅಜುಕೇಶ್ನ್ ಟ್ರಸ್ಟ್ ಅಧ್ಯಕ್ಷ ಶಶಿಕಿರಣ್, ಕಾರ್ಯದರ್ಶಿ ವೈ.ವಿ. ವಿನಯ್, ನಿರ್ದೇಶಕ ಎಸ್.ಟಿ. ವೀರೇಶ್, ಉಪಾಧ್ಯಕ್ಷ ಕೆ. ರಘು ಭಾಗಿಯಾಗಲಿದ್ದಾರೆ.
ಡಿವಿಜಿ ಸುದ್ದಿ, ವಾಟ್ಸ್ ಆಪ್: 7483892205