ಡಿವಿಜಿ ಸುದ್ದಿ, ದಾವಣಗೆರೆ: ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಡಿ ಬಸವರಾಜ ಅವರಿಗೆ ಕೊಲೆ ಬೆದರಿಕೆ ಪತ್ರ, ಫೋನ್ ಕಾಲ್ ಗಳು ಬರುತ್ತಿದ್ದು, ಸೂಕ್ತ ಭದ್ರತೆ ನೀಡಬೇಕು ಎಂದು ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಗವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ರವರಿಗೆ ಪತ್ರ ಬರೆದಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾಂಗ್ರೆಸ್ ಮುಖಂಡರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ನೀಡಿದರು. ಈ ಸಂದರ್ಭದಲ್ಲಿ ಡಿ. ಬಸವರಾಜ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ .ಕೆ. ಶೆಟ್ಟಿ, ಪಾಲಿಕೆ ವಿರೋಧಪಕ್ಷದ ನಾಯಕ ಎ. ನಾಗರಾಜ್ ಸದಸ್ಯರುಗಳಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಕೆ. ಚಮನ್ ಸಾಬ್, ಸೈಯದ್ ಚಾರ್ಲಿ, ವಿನಾಯಕ ಪೈಲ್ವಾನ್ ಪಕ್ಷದ ಮುಖಂಡರಾದ ಹುಲ್ಮನಿ ಗಣೇಶ್, ತರಕಾರಿ ಚಂದ್ರಪ್ಪ, ಕೆ. ಎಲ್.ಹರೀಶ್ ಬಸಾಪುರ, ಬಾತಿ ಶಿವಕುಮಾರ್ ಉಪಸ್ಥಿತರಿದ್ದರು.



