ಡಿವಿಜಿ ಸುದ್ದಿ, ದಾವಣಗೆರೆ: ಈ ಬಾರಿ ಕೊರೊನಾ ಭೀತಿ ಹಿನ್ನೆಲೆ ಸರಳವಾಗಿ ಮನೆಯಲ್ಲಿಯೇ ಕಿಲಾರಿ ಹೋರಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಕಾಂಗ್ರೆಸ್ ಹಿರಿಯ ಮುಖಂಡ, ಅಖಿಲ ಭಾರತ ವೀರಶೈವ ಮಹಾ ಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರು ಬಸವ ಜಯಂತಿ ಆಚರಿಸಿದರು.

ದಾವಣಗೆರೆ ನಗರದ ಎಂಸಿಸಿ ಎ ಬ್ಲಾಕ್ ನಲ್ಲಿ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರೊಂದಿಗೆ ಬಸವ ಜಯಂತಿ ಆಚರಿಸಿದರು. ಎಲ್ಲರಿಗೂ ಬಸವ ಜಯಂತಿಯ ಶುಭಾಶಯ ತಿಳಿಸಿದ ಶಾಮನೂರು ಶಿವಶಂಕರಪ್ಪ, ಕೊರೊನಾ ವೈರಸ್ ಭೀತಿ ಹಿನ್ನೆಲೆ ಯಲ್ಲಿ ಎಲ್ಲರೂ ಮನೆಯಲ್ಲಿ ಬಸವ ಜಯಂತಿ ಆಚರಿಸುವಂತೆ ವಿನಂತಿಸಿದರು.



