ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯ ಎಂಸಿಸಿ ಬಿ ಬ್ಲಾಕ್ , ಆಂಜನೇಯ ಬಡಾವಣೆ ಮತ್ತು ಸಿದ್ಧವೀರಪ್ಪ ಬಡಾವಣೆಯ ನಾಗರಿಕರು ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಭಕ್ತ ಮಂಡಳಿ ವತಿಯಿಂದ ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪ್ರಥಮ ಪುಣ್ಯ ಸಂಸ್ಮರಣೋತ್ಸವನ್ನು ಆಚರಿಸಿದರು.
ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಶ್ರೀಗಳ ಭಾವ ಚಿತ್ರಕ್ಕೆ ಪುಷ್ಬ ನಮನ ಸಲ್ಲಿಸಿದರು. ಬಸವ ಕೇಂದ್ರದ ಬಸವಪ್ರಭು ಸ್ವಾಮೀಜಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪ್ರೊ. ಗೀತಾ ಉಪನ್ಯಾಸ ನೀಡಿದರು. ಇದಕ್ಕೂ ಮುನ್ನ ಭಜನೆ ಮೂಲಕ ಶ್ರೀಗಳಿಗೆ ನಮನ ಸಲ್ಲಿಸಲಾಯಿತು.





