ಡಿವಿಜಿ ಸುದ್ದಿ, ದಾವಣಗೆರೆ: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿಯ ಅಡಿ ವಿಶೇಷ ಕಿರು ಸಾಲ ಸೌಲಭ್ಯ ಯೋಜನೆ ಅಭಿಯಾನ ಯೋಜನೆಗೆ ಬೀದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ಜು.01 ರಿಂದ ಆರಂಭಗೊಂಡು 2022 ರವರೆಗೆ ಯೋಜನೆಯ ಅಭಿಯಾನ ನಡೆಯಲಿದೆ. ಬೀದಿ ವ್ಯಾಪಾರಿಗಳ ಕೈಗೆಟುಕುವ ಬಡ್ಡಿ ದರದಲ್ಲಿ ಬ್ಯಾಂಕುಗಳ ಮೂಲಕ ರೂ. 10 ಸಾವಿರಗಳವರೆಗೆ ಸಾಲ ಸೌಲಭ್ಯ ನೀಡಲಾಗುವುದು. ನಿಯಮಿತವಾಗಿ ಸಾಲ ಮರುಪಾವತಿ ಮಾಡಿದವರಿಗೆ ಕೇಂದ್ರ ಸರ್ಕಾರದಿಂದ ಶೇ.7 ರಷ್ಟು ಬಡ್ಡಿ ಸಹಾಯಧನವನ್ನು ನೀಡಲಾಗುವುದು. ಜೊತೆಗೆ ಡಿಜಿಟಲ್ ವಹಿವಾಟಿಗೆ ಉತ್ತೇಜನ ಹಾಗೂ ಬಹುಮಾನ ನೀಡುವ ಉದ್ದೇಶಗಳನ್ನು ಈ ಯೋಜನೆ ಹೊಂದಿದೆ.
ಸಮೀಕ್ಷೆಯಲ್ಲಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಸ್ಥರು ಅರ್ಹ ಫಲಾನುಭವಿಗಳಾಗುತ್ತಾರೆ. ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಬೀದಿ ವ್ಯಾಪಾರಸ್ಥರು ಅರ್ಹ ದಾಖಲಾತಿಗಳನ್ನು ನಿಗಧಿತ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು.
ಸಲ್ಲಿಸಬೇಕಾದ ದಾಖಲಾತಿಗಳು : ಬಿಪಿಎಲ್ ಕಾರ್ಡ್, ಆಧಾರ್ ಕಾರ್ಡ್, ಚುನಾವಣೆ ಗುರುತಿನ ಚೀಟಿ, ವೈಯಕ್ತಿಕ ಉಳಿತಾಯ ಬ್ಯಾಂಕ್ ಪಾಸ್ ಬುಕ್ ಪ್ರತಿ, ವ್ಯಾಪಾರ ಮಾಡುತ್ತಿರುವ ಸ್ಥಳದಲ್ಲಿನ ಫೋಟೊ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಈಗಾಗಲೇ ವಿತರಿಸಿದ ಗುರುತಿನ ಚೀಟಿ ಹಾಗೂ ಇನ್ನಿತರ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.