ಡಿವಿಜಿ ಸುದ್ದಿ, ದಾವಣಗೆರೆ : ಮಧ್ಯ ಕರ್ನಾಟಕದ ದಾವಣಗೆರೆ ನಗರ ಸ್ಮಾರ್ಟ್ ಸಿಟಿ ನಿರ್ವಹಣೆಯ ಪಟ್ಟಿಯಲ್ಲಿ ರಾಷ್ಟ್ರ ಮಟ್ಟದಲ್ಲಿ 8 ಸ್ಥಾನ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದಿದೆ.
ಸ್ಮಾರ್ಟ್ ಸಿಟಿ ಮಿಷನ್ ಅಡಿಯಲ್ಲಿ ಅನುಷ್ಠಾನಗೊಳಿಸಲಾಗುವ ಯೋಜನೆಗಳ ಪ್ರಗತಿ, ಅನುದಾನ ಸದ್ಬಳಕೆ ಮತ್ತಿತರೆ ಮಾಹಿತಿಗಳನ್ನು ಆಧರಿಸಿ ಸ್ಥಾನ ನೀಡಲಾಗಿದೆ. ದೇಶದ 100 ಸ್ಮಾರ್ಟ್ ಸಿಟಿಗಳ ಪೈಕಿ ದಾವಣಗೆರೆ ನಗರವು 8ನೇ ಸ್ಥಾನ ಪಡೆದುಕೊಂಡಿದೆ. ಜ್ಯದ 7 ಸ್ಮಾರ್ಟ್ ಸಿಟಿಗಳ ಪೈಕಿ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಸ್ವಚ್ಛ ಸರ್ವೇಕ್ಷಣಾ ಸಮೀಕ್ಷೆ-2020 ನಗರದ ಸ್ವಚ್ಛತೆಗೆ ಸಂಬಂಧಿಸಿದ್ದಾಗಿದ್ದು, ಈ ಪಟ್ಟಿಯಲ್ಲಿ ದಾವಣಗೆರೆ ನಗರ ಪಡೆದ ಸ್ಥಾನಕ್ಕೂ, ಸ್ಮಾರ್ಟ್ ಸಿಟಿ ಪಟ್ಟಿಗೂ ಯಾವುದೇ ಸಂಬಂಧವಿರುವುದಿಲ್ಲವೆಂದು ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ತಿಳಿಸಿದ್ದಾರೆ.



