ಡಿವಿಜಿ ಸುದ್ದಿ, ದಾವಣಗೆರೆ : ಜಿಲ್ಲೆಯಲ್ಲಿ ಇಂದು ನಡೆದ ಎಸ್‍ಎಸ್‍ಎಲ್‍ಸಿ ಸಮಾಜ ವಿಜ್ಞಾನ ಪರೀಕ್ಷೆಗೆ ಒಟ್ಟು 21693 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 20568 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 1125 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಕಂಟೈನ್‍ಮೆಂಟ್ ಝೋನ್‍ನಿಂದ 80 ವಿದ್ಯಾರ್ಥಿಗಳು ಬಂದು ಪರೀಕ್ಷೆ ಬರೆದಿದ್ದಾರೆ. ಒಟ್ಟು 418 ಜನರು ಖಾಸಗಿ ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಇದರಲ್ಲಿ 331 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 87 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
392 ವಲಸೆ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು ಈ ಪೈಕಿ 387 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 05 ವಿದ್ಯಾರ್ಥಿ ಗೈರು ಹಾಜರಾಗಿದ್ದಾರೆ. 183 ವಿದ್ಯಾರ್ಥಿಗಳು ವಸತಿ ನಿಲಯದಲ್ಲಿದ್ದು ಪರೀಕ್ಷೆಗೆ ಹಾಜರಾಗಿದ್ದಾರೆ.