Connect with us

Dvgsuddi Kannada | online news portal | Kannada news online

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಪ್ರಮುಖ ಸುದ್ದಿ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆ

ಡಿವಿಜಿ ಸುದ್ದಿ , ದಾವಣಗೆರೆ: ನಗರದ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನಲ್ಲಿದ್ದ ವ್ಯಕ್ತಿಯೊಬ್ಬ ಆಸ್ಪತ್ರೆಯ ಶೌಚಾಲಯದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ದಾವಣಗೆರೆಯ ಆನೆಕೊಂಡ ನಿವಾಸಿ ಕಂಟೈನ್ಮೆಂಟ್ ಏರಿಯಾದಲ್ಲಿ ವಾಸಿಸುತ್ತಿದ್ದರು. ಇವರಿಗೆ ಕೆಮ್ಮು ಜ್ವರದಂತಹ ಲಘು ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ದಾವಣಗೆರೆಯ ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೇ 20ರಂದು ಗಂಟಲು ದ್ರವವನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವರದಿ ಬರುವ  ಮುನ್ನವೇ ಇವತ್ತು  ಬೆಳಗ್ಗೆ 7.30ರ ಸುಮಾರಿಗೆ ಆಸ್ಪತ್ರೆಯ ಶೌಚಾಲಯದಲ್ಲಿ  ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಈ ಸಂಬಂಧ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ ಕೊರೊನಾ ಬಂದರೆ ನನ್ನ ಕ್ವಾರಂಟೈನ್ ಮಾಡುತ್ತಾರೆ ಎಂಬ ಭಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಈ ರೀತಿ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top