ಡಿವಿಜಿ ಸುದ್ದಿ, ದಾವಣಗೆರೆ: ಹರಿಹರದ ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠದಲ್ಲಿ ನಡೆಯುತ್ತಿರುವ 2 ನೇ ವರ್ಷದ ವಾಲ್ಮೀಕಿ ಜಾತ್ರೆಗೆ ಧಾರವಾಡದ ಶ್ರೀ ಗುರು ಬಸವ ಮಹಾಮನೆ ಶ್ರೀ ಬಸವಾನಂದ ಸ್ವಾಮೀಜಿ ಮಹರ್ಷಿ ವಾಲ್ಮೀಕಿ ಧ್ವಜಾರೋಹಣ ನೆರವೇರಿಸುವ ಮೂಲಕ ಜಾತ್ರೆಗೆ ಅದ್ಧೂರಿಯಾಗಿ ಚಾಲನೆ ನೀಡಿದರು.

ಧ್ವಜರೋಹಣ ನಂತರ ರಾಜನಹಳ್ಳಿಯಿಂದ ವಾಲ್ಮೀಕಿ ಮಠದ ವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಕಲಾ ಪ್ರದರ್ಶನ ನೀಡಿದರು. ವಿವಿಧ ಜಿಲ್ಲೆಗಳಿಂದ ವಾಲ್ಮೀಕಿ ಸಮಾಜದ ಅಪಾರ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು.
ನಂತರ ನಡೆದ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಶಾಸಕ ಎಸ್. ರಾಮಪ್ಪ ಚಾಲನೆ ನೀಡಿದರು. ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಸಚಿವ ಶ್ರೀರಾಮುಲು, ಶಾಸಕ ತಿಪ್ಪಾರೆಡ್ಡಿ, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಮಾಜಿ ಶಾಸಕ ಬಿ.ಪಿ. ಹರೀಶ್ , ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರೇಶ್ ಹನಗವಾಡಿ ಸೇರಿದಂತೆ ಇತರೆ ಗಣ್ಯರು ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪುಷ್ಬ ನಮನ ಸಲ್ಲಿಸಿದರು. ನವ ಜೀವನಕ್ಕೆ ಕಾಲಿಟ್ಟ ದಂಪತಿಗಳಿಗೆ ಶುಭ ಹಾರೈಸಿದರು.

ಇದಾನ ಬಳಿಕ ಹರಿಹರ ತಾಲ್ಲೂಕಿನ ಎಲ್ಲಾ ಸಮಾಜದ ಮುಖಂಡರಿಗೆ ಹಾಗೂ ವಾಲ್ಮೀಕಿ ಗುರು ಪೀಠದ ಧರ್ಮದರ್ಶಿಗಳನ್ನು ಶ್ರೀಗಳು ಸನ್ಮಾನಿಸಿದರು. ರಾಜ್ಯ ಮಟ್ಟದ ವಾಲ್ಮೀಕಿ ಮಹಿಳಾ ಜಾಗೃತಿ ಸಮಾವೇಶದಲ್ಲಿ ಬುಡಕಟ್ಟು ಮಹಿಳೆಯರ ಸಬಲೀಕರಣ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.



