Connect with us

Dvgsuddi Kannada | online news portal | Kannada news online

ಡಿಸಿಎಂ ಹುದ್ದೆ ಅವಶ್ಯಕತೆ ಇಲ್ಲ: ವಾಲ್ಮೀಕಿ ಶ್ರೀ

ದಾವಣಗೆರೆ

ಡಿಸಿಎಂ ಹುದ್ದೆ ಅವಶ್ಯಕತೆ ಇಲ್ಲ: ವಾಲ್ಮೀಕಿ ಶ್ರೀ

ಡಿವಿಜಿ ಸುದ್ದಿ, ದಾವಣಗೆರೆ: ವಾಲ್ಮೀಕಿ ಸಮಾಜಕ್ಕೆ ಡಿಸಿಎಂ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದ ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು, ಇದೀಗ ಡಿಸಿಎಂ ಹುದ್ದೆ ತೆಗೆದರೆ  ಸರ್ಕಾರದಲ್ಲಿರುವ ಗೊಂದಲ ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.

ನಗರದಲ್ಲಿ ವಾಲ್ಮೀಕಿ ಜಾತ್ರೆಯ ಪ್ರಯುಕ್ತ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಡಿಸಿಎಂ ಹುದ್ದೆ ತೆಗೆಯಲು ನಮ್ಮದೇನೂ ವಿರೋಧವಿಲ್ಲ. ಒಂದು ವೇಳೆ  ಡಿಸಿಎಂ ಹುದ್ದೆ ಮುಂದುವರಿಸಿದರೆ, ನಮ್ಮ ಸಮುದಾಯಕ್ಕೊಂದು  ಅವಕಾಶ ನೀಡಬೇಕು ಎಂದರು.

ಬಿಜೆಪಿ ಅಧಿಕಾರಕ್ಕೆ ಬರುವುದಕ್ಕಿಂತ ಮೊದಲು ವಾಲ್ಮೀಕಿ ಸಮಾಜಕ್ಕೆ ಡಿಸಿಎಂ ಸ್ಥಾನ ನೀಡುವುದಾಗಿ ಮಾಧ್ಯಮಗಳಲ್ಲಿ ನೋಡಿದ್ದೇವೆ. ಅದರಲ್ಲೂ ವಾಲ್ಮೀಕಿ ಸಮಾಜ ರಾಜ್ಯದ ನಾಲ್ಕನೇ ಅತಿ ದೊಡ್ಡ ಸಮಾಜವಾಗಿದ್ದು, ನಮ್ಮ ಸಮುದಾಯದಿಂದ ರಮೇಶ್ ಜಾರಕಿಹೊಳಿ, ಶ್ರೀರಾಮುಲು  ಡಿಸಿಎಂ ಹುದ್ದೆಗೆ ಪ್ರಬಲ ಆಕಾಂಕ್ಷಿಗಳಿದ್ದು, ಇಬ್ಬರಲ್ಲಿ ಒಬ್ಬರಿಗೆ ಡಿಸಿಎಂ ಹುದ್ದೆ ನೀಡಬೇಕು ಎಂದು ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಒತ್ತಾಯಿಸಿದರು.

ಡಿವಿಜಿ ಸುದ್ದಿ, ವಾಟ್ಸ್ ಆಪ್: 7483892205

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top